ಗದಗ: 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಗದಗ ನಗರಕ್ಕೆ ಹೊಸದಾಗಿ ಮಂಜೂರಾಗಿರುವ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿ ಮತ್ತು ಉರ್ದು, ವಿಜ್ಞಾನ ವಿಭಾಗದ ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಹಾಗೂ ಜೀವವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ವಿಜ್ಞಾನ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ, ಕಲಾ ವಿಭಾಗದ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಷಯಗಳನ್ನು ಬೋಧಿಸಲು ಅರ್ಹ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಮೇ 15ರೊಳಗಾಗಿ ತಮ್ಮ ಶೈಕ್ಷಣಿಕ ದಾಖಲಾತಿಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜಿಲ್ಲಾ ನ್ಯಾಯಾಲಯದ ಎದುರುಗಡೆ, ಗದಗ ಕಚೇರಿಗೆ ಖುದ್ದು ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-23-9402453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.