ಗಂಗಾವತಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಒತ್ತಾಯಿಸಿ, ಶುಕ್ರವಾರ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯರು ನಗರದ ಕೃಷ್ಣದೇವರಾಯ ವೃತ್ತದಲ್ಲಿ ಗ್ರೇಡ್-2 ತಹಶೀಲ್ದಾರ ಮಹಾಂತಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮುಖಂಡ ಶರಣು ಪಾಟೀಲ ಮಾತನಾಡಿ,‘ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕೆಲ ತಿಂಗಳ ಹಿಂದೆ ಅಧಿಸೂಚನೆ ಹೊರಡಿಸುವ ಭರವಸೆ ನೀಡಿದ್ದರು. ಈವರೆಗೆ ಯಾವುದೇ ಅಧಿಸೂಚನೆಯೂ ಹೊರಡಿಸಿಲ್ಲ. ಈಚೆಗೆ ಕೆಪಿಎಸ್ಸಿಯ ಕೆಎಎಸ್ ಪರೀಕ್ಷೆಯಲ್ಲಿ ಭ್ರಷ್ಟಾಚಾರದ ವಾಸನೆ ಹೊರ ಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡಿಸಿ, ಕೆಪಿಎಸ್ಸಿ ಕಿತ್ತಾಕಿ ಪಿ.ಸಿ.ಹೋಟಾ ಸಮಿತಿ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಉದ್ಯೋಗಾಕಾಂಕ್ಷಿ ಆಂಜನೇಯ ರಾಂಪುರ ಮಾತನಾಡಿ,‘ನಾನು ಹಲವು ವರ್ಷಗಳಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದು, ಈವರೆಗೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸುತ್ತಿಲ್ಲ. ವಯಸ್ಸಾದರೇ ನಮ್ಮ ಭವಿಷ್ಯದ ಕತೆಯಾದರೂ ಏನೂ? ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯ ಬಸವ ರಾಜ ವಂಕಲಕುಂಟಿ, ಉದ್ಯೋಗಾಕಾಂಕ್ಷಿ ಗ್ಯಾನೇಶ ಮಾತನಾಡಿದರು.

ಈ ವೇಳೆ ಬಸವರಾಜ, ಗಣೇಶ, ರವಿಕುಮಾರ, ವೆಂಕಣ್ಣ, ಅಖಿಲ್ ಕುಮಾರ, ಶ್ರೀನಿವಾಸ, ಜ್ಯೋತಿ, ಸಂಜನಾ, ನೀಲಪ್ಪ, ಹನುಮೇಶ, ಚಂದ್ರಶೇಖರ, ಮಂಜುನಾಥ ಅವರು ಉಪಸ್ಥಿತರಿದ್ದರು.

ಕೊಪ್ಪಳ: ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳಿಗೆ ಕೂಡಲೇ ಅಧಿಸೂಚನೆ ಹೊರಡಿಸಿ, ಕೆ.ಪಿ.ಎಸ್.ಸಿ. ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಜಿಲ್ಲಾಡಳಿತದ ಭವನದ ಮೂಲಕ ಚುನಾವಣಾ ತಹಶೀಲ್ದಾರ್ ರವಿಕುಮಾರ್ಗೆ ಮನವಿ ಸಲ್ಲಿಸಲಾಯಿತು.

ಎಲ್ಲಾ ನೇಮಕಾತಿಗಳಿಗೆ ದುಬಾರಿ ಅರ್ಜಿ ಶುಲ್ಕ ಕೈಬಿಡಬೇಕು, ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಒದಗಿಸಬೇಕು, ರಾಜ್ಯದಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕು, ಸರ್ಕಾರಿ ಉದ್ಯೋಗಗಳ ಮೇಲಿನ ಅನುದಾನ ಕಡಿಮೆ ಮಾಡಲು, ತನ್ಮೂಲಕ ಉದ್ಯೋಗ ಕಡಿತಗೊಳಿಸಲು ಪ್ರಮುಖ ಕಾರಣವಾಗಿರುವ ಎಫ್ಆರ್ಬಿಎಂ ಕಾಯ್ದೆ–2023 ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಮುಖಂಡರಾದ ಶರಣು ಪಾಟೀಲ್, ಶರಣು ಗಡ್ಡಿ, ಸುಭಾನ್ ಸಾಬ್ ಉದ್ಯೋಗದ ಆಕಾಂಕ್ಷಿಗಳಾದ ಶಿವಮೂರ್ತಿ ವದಗನಾಳ್, ರವಿ ಹೂವಿನಾಳ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-717660861

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.