ಹಲಗೂರು: ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ ಸ್ವಾವಲಂಬಿ ಜೀವನ ಕಟ್ಟಿಕೊಡಲು ಲಯನ್ಸ್ ಕ್ಲಬ್ ಯೋಜನೆ ರೂಪಿಸಿರುವುದು ಶ್ಲಾಘನೀಯ ಕಾರ್ಯ ಎಂದು ಲಯನ್ಸ್ ಜಿಲ್ಲಾ ಉಪ ರಾಜ್ಯಪಾಲ ಸಿದ್ದೇಗೌಡ ಹೆಳಿದರು.

ಹಲಗೂರಿನ ಚನ್ನಪಟ್ಟಣದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನಸಾಮಾನ್ಯರು ಉದ್ಯೋಗ ಅರಸಿ ಪಟ್ಟಣಗಳತ್ತ ಮುಖ ಮಾಡುತ್ತಿದ್ದು, ಲಯನ್ಸ್ ಸಂಸ್ಥೆಯು ಗ್ರಾಮೀಣ ಜನರಿಗೆ ಬದುಕು ಕಟ್ಟಿಕೊಡಲು ಹೊರಟಿದೆ. ಕ್ಲಬ್ ಸದಸ್ಯರೆಲ್ಲರೂ ಸೇರಿ ಸಮಾಜಕ್ಕೆ ಉತ್ತಮ ಸಂದೇಶವನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಲಯನ್ಸ್ ಜ್ಯೋತಿ ಮಂಜುನಾಥ್ ಮಾತನಾಡಿ, ಉಳ್ಳವರು ಮತ್ತು ಇಲ್ಲದವರ ನಡುವೆ ಕೊಂಡಿಯಾಗಿ ಕೆಲಸ ಮಾಡಿದಾಗ ಹಿಂದುಳಿದ ಸಮುದಾಯದ ಕುಟುಂಬಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದರು.

ಲಯನ್ಸ್ ವಲಯ ಅಧ್ಯಕ್ಷ ಸೋಮೇಗೌಡ, ಜ್ಯೋತಿ ಮಂಜುನಾಥ್, ಹಲಗೂರು ಲಯನ್ಸ್ ಕ್ಲಬ್ ಅಧ್ಯಕ್ಷ ಮನೋಹರ್, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಸಿ.ಪ್ರವೀಣ್, ಕ್ಲಬ್ ಪದಾಧಿಕಾರಿ ಎ.ಎಸ್.ದೇವರಾಜು, ಸುರೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-40-658496780

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.