ಹಳಿಯಾಳ: ‘ತಾಂತ್ರಿಕ ಜ್ಞಾನ, ಪ್ರಾಮಾಣಿಕತೆ, ಶಿಸ್ತಿನ ಜೊತೆ ನಿರಂತರ ಅಧ್ಯಯನವೇ ದೀರ್ಘಕಾಲಿಕ ಯಶಸ್ಸಿಗೆ ಕಾರಣವಾಗುತ್ತದೆ’ ಎಂದು ಕೆಪಿಸಿ, ಗಣೇಶಗುಡಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಘೋಷಣಟ್ಟಿ ಹೇಳಿದರು.

ಇಲ್ಲಿನ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿಯಲ್ಲಿ ಬುಧವಾರ ಆಯೋಜಿಸಿದ್ದ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್, ರಿಪೇರಿ ಮತ್ತು ಸರ್ವಿಸಿಂಗ್ ಉಚಿತ ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.

‘ತರಬೇತಿಯಲ್ಲಿ ಕಲಿತ ಕೌಶಲಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ. ಇಂದಿನ ದಿನಗಳಲ್ಲಿ ರಿಪೇರಿ ಮತ್ತು ಸರ್ವಿಸಿಂಗ್ ಕ್ಷೇತ್ರದಲ್ಲಿ ಪರಿಣಿತ ತಾಂತ್ರಿಕರಿಗೆ ಹೆಚ್ಚಿನ ಬೇಡಿಕೆ ಇದೆ. ಸ್ಥಳೀಯ ಉದ್ಯಮಗಳ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು’ ಎಂದರು.

ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚವ್ವಾಣ ಮಾತನಾಡಿ, ‘ಗ್ರಾಮೀಣ ಯುವಕರಿಗೆ ತಾಂತ್ರಿಕ ಕೌಶಲಗಳನ್ನು ನೀಡುವ ಮೂಲಕ ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ಉದ್ಯಮಿ ಆಕಾಶ ಪೋಕಲೆ ಮಾತನಾಡಿದರು. ಉಪನ್ಯಾಸಕ ಕೊಂಡು ಕೋಕರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-20-1926342884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.