ಹೆಬ್ರಿ: ‘ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿತು, ಸಂದರ್ಶನ ಎದುರಿಸಿ ಪದವಿ ಮುಗಿಯುವಾಗಲೇ ಕೆಲಸ ಪಡೆದು ಹೋಗುತ್ತಿರುವುದು ಅತ್ಯಂತ ಹೆಮ್ಮೆ ಎನಿಸುತ್ತಿದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಲಿಕೆಯ ವಾತಾವರಣದ ಜೊತೆಗೆ ಹಲವು ಅತ್ಯುತ್ತಮ ಅವಕಾಶಗಳನ್ನು ನೀಡುತ್ತಿದ್ದೇವೆ’ ಎಂದು ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಧಾಕರ್ ಕೆ.ಜಿ ಹೇಳಿದರು.

ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಉದ್ಯೋಗ ಕೋಶ ಸಮಿತಿಯಿಂದ ಬೆಂಗಳೂರಿನ ‘ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ’ ಸಹಯೋಗದಲ್ಲಿ ಕ್ಯಾಂಪಸ್ ಸಂದರ್ಶನ ನಡೆಸಿ, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಕ್ರವಾರ ನೇಮಕಾತಿ ಪತ್ರ ವಿತರಿಸಲಾಯಿತು.

ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಮಾನವಿಕ ವಿಭಾಗದಿಂದ ಒಟ್ಟು 29 ವಿದ್ಯಾರ್ಥಿಗಳು ಸಂದರ್ಶನ ಎದುರಿಸಿ, ಕೆಲಸಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಪದವಿ ಪೂರ್ಣಗೊಂಡ ನಂತರ, ಕೆಲಸಕ್ಕೆ ಹಾಜರಾಗಬಹುದೆಂದು ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ವಿಕಾಸ್ ತಿಳಿಸಿದ್ದಾರೆ.

ಪ್ಲೇಸ್ಮೆಂಟ್ ಅಧಿಕಾರಿಯಾದ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಆನಂದ್ ಕುಮಾರ್ ಜಿ. ಅವರನ್ನು ಅಭಿನಂದಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-28-657535724

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.