ಮಂಗಳವಾರ, ಡಿಸೆಂಬರ್ 7, 2021
24 °C

ಹೆಸ್ಕಾಂ | Diploma, Degree ವಿದ್ಯಾರ್ಹತೆ: 200 ಅಪ್ರೆಂಟಿಸ್‌ಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿ ನೀಡಲು ಡಿಪ್ಲೊಮಾ ಹಾಗೂ ಪದವಿ ಪಡೆದ ಅಭ್ಯರ್ಥಿಗಳಿಂದ  ಶಿಶುಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ...

1) ಡಿಪ್ಲೊಮ ಇನ್‌ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌

ತರಬೇತಿ ಹುದ್ದೆಗಳ ಸಂಖ್ಯೆ: 75

ತರಬೇತಿ ಅವಧಿ: 1 ವರ್ಷ

ತರಬೇತಿ ಭತ್ಯೆ: ₹5000

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಡಿಪ್ಲೊಮಾ ಪಡೆದಿರಬೇಕು. 

2) ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಪದವಿ

ತರಬೇತಿ ಹುದ್ದೆಗಳ ಸಂಖ್ಯೆ: 125

ತರಬೇತಿ ಅವಧಿ: 1 ವರ್ಷ

ತರಬೇತಿ ಭತ್ಯೆ: ₹7000

ಮೆರೀಟ್‌ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹೆಸ್ಕಾಂ ವೆಬ್‌ಸೈಟ್‌ ನೋಡುವುದು. 

ಅರ್ಜಿ ಸಲ್ಲಿಸಲು ಕೊನೆಯ ದಿನ: 20-10-2021

ವೆಬ್‌ಸೈಟ್‌: https://hescom.karnataka.gov.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು