ಹೊನ್ನಾವರ: ‘ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಂಡರೆ ಸಮಯದ ಉಳಿತಾಯವಾಗಿ, ಹೆಚ್ಚಿನ ಕೆಲಸ ಮಾಡಲು ಅವಕಾಶ ಸಿಗುತ್ತದೆ. ವೃತ್ತಿ ಕೌಶಲವಿದ್ದರೆ ಉತ್ತಮ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ’ ಎಂದು ಎಕ್ಸೆಂಚರ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ವಿನಾಯಕ ಹೆಗಡೆ ನೀಲ್ಕೋಡ ಹೇಳಿದರು.

ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಬಿಸಿಎ ವಿಭಾಗದ ವತಿಯಿಂದ ಈಚೆಗೆ ನಡೆದ ‘ಎನಿಗ್ಮಾ’ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ಬಳಿಕ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಪ್ರಾಚಾರ್ಯ ಜಿ.ಎನ್. ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಎಂಪಿಇ ಸೊಸೈಟಿಯ ಕಾರ್ಯದರ್ಶಿ ಎಸ್.ಎಂ. ಭಟ್ಟ, ಎಂಸಿಎ ವಿಭಾಗದ ಮುಖ್ಯಸ್ಥೆ ವಂದನಾ ಭಟ್ಟ, ಬಿಸಿಎ ವಿಭಾಗ ಮುಖ್ಯಸ್ಥ ಪ್ರಸನ್ನ ಶೇಟ್, ಪ್ಲೇಸ್ಮೆಂಟ್ ಅಧಿಕಾರಿ ಡಿ.ಎಲ್. ಹೆಬ್ಬಾರ, ವಿದ್ಯಾರ್ಥಿ ಪ್ರತಿನಿಧಿ ದಿನೇಶ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-20-789620278

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.