ಹುಬ್ಬಳ್ಳಿ: ಇಲ್ಲಿನ ಜಿಟಿಟಿಸಿ - ಮಲ್ಟಿ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಬೆಂಗಳೂರಿನ ಬಾಷ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮೂರು ತಿಂಗಳ ಕಾರ್ ಸರ್ವಿಸ್ ಟೆಕ್ನಿಷಿಯನ್ ತರಬೇತಿಯನ್ನು ಆಯೋಜಿಸಲಾಗಿದೆ.

ಎಸ್ಎಸ್ಎಲ್ಸಿ ಉತ್ತೀರ್ಣ, ಪಿಯುಸಿ/ ಡಿಪ್ಲೊಮಾ ಸೇರಿ ಯಾವುದೇ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ 18ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ತರಬೇತಿಗೆ ಪ್ರವೇಶ ಪಡೆಯಬಹುದು. ತರಬೇತಿ ಏಪ್ರಿಲ್ 15ರಿಂದ ಪ್ರಾರಂಭವಾಗಲಿದೆ. ತರಬೇತಿ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ, ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ. ಆಸಕ್ತರು ಏಪ್ರಿಲ್ 14ರೊಳಗೆ ಖುದ್ದಾಗಿ ಜಿಟಿಟಿಸಿ ಹುಬ್ಬಳ್ಳಿ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದು.

ಅಭ್ಯರ್ಥಿಗಳಿಗೆ ವಾಹನ ವ್ಯವಸ್ಥೆ ಅಧ್ಯಯನ, ಕಾರು ತಪಾಸಣೆ, ದುರಸ್ತಿ, ನಿರ್ವಹಣೆ, ಬಿಡಿ ಭಾಗಗಳ ಜೋಡಣೆ, ಉಪಕರಣಗಳ ಬಳಕೆ, ಸಂವಹನ, ವ್ಯಕ್ತಿತ್ವ ವಿಕಸನ, ಮತ್ತು ಕಂಪ್ಯೂಟರ್ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ: ಜಿಟಿಟಿಸಿ, ಇಂಡಸ್ಟ್ರಿಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ. ದೂ.ಸಂ: 0836–2333159

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-24-1196879368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.