ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಬಸವೇಶ್ವರ ನಗರದ ವಿಶ್ವಶ್ರಮ ಚೇತನ ಆವರಣದಲ್ಲಿರುವ ಡಾ.ಕೆ.ಎಸ್. ಶರ್ಮಾ ಸಭಾಭವನದಲ್ಲಿ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ, ಮೇ ದಿನಾಚರಣೆ 2026 ಕಾರ್ಯಕ್ರಮವನ್ನು ಮೇ 1ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.

ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಭಾರತ ಏಕತಾ ಆಂದೋಲನ ಹಾಗೂ ಬಸವ ಶಾಂತಿ ಮಿಷನ್ ಅಧ್ಯಕ್ಷ ಮಹದೇವ ಹೊರಟ್ಟಿ, ಅಂಕೋಲಾ ತಾಲ್ಲೂಕಿನ ಬೆಳಸೆ ಗ್ರಾಮದ ರೂರಲ್ ಪ್ರೋಗ್ರೆಸಿವ್ ಸೊಸೈಟಿಯ ಮಾಧ್ಯಮಿಕ ಶಾಲೆ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಎಸ್. ಪ್ರಭು ಅವರಿಗೆ ‘ಸಾಮಾಜಿಕ ಸೇವಾ ಧುರಂಧರ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.

‘ವಿಶ್ವಶ್ರಮ ಚೇತನ’ದಲ್ಲಿ ಸ್ಥಾಪಿಸಿರುವ ಸಂಜೀವಿನಿ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿ ಡಾ. ಶ್ರೀನಿವಾಸ ಕೆ. ಬನ್ನಿಗೋಳ ಅವರಿಗೆ ‘ನವ ಧನ್ವಂತರಿ ಭೂಷಣ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂದರ್ಭದಲ್ಲಿ ಡಾ. ಶ್ರೀನಿವಾಸ ಬನ್ನಿಗೋಳ ಆಯುರ್ವೇದ ಅಕಾಡೆಮಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ವಿಶ್ವಶ್ರಮ ಚೇತನದ ಸಂಸ್ಥಾಪಕ ಕೆ.ಎಸ್. ಶರ್ಮಾ ಅಧ್ಯಕ್ಷತೆ ವಹಿಸಿ, ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-641972508

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.