ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IBPS: 6432 ಬ್ಯಾಂಕ್ ಆಫೀಸರ್‌ ಹುದ್ದೆಗಳಿಗೆ ಅರ್ಜಿ; ಪದವಿ ವಿದ್ಯಾರ್ಹತೆ

Last Updated 3 ಆಗಸ್ಟ್ 2022, 11:27 IST
ಅಕ್ಷರ ಗಾತ್ರ

ಬೆಂಗಳೂರು:ಬ್ಯಾಂಕ್ ನೇಮಕಾತಿ ಸಿಬ್ಬಂದಿ 2022–23ನೇ ಸಾಲಿನಲ್ಲಿ ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 6432 ಪ್ರೊಬೆಷನರಿ ಆಫೀಸರ್ಸ್‌/ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆಗಳ ಭರ್ತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಸಾಮಾನ್ಯ ನೇಮಕಾತಿ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯಪರೀಕ್ಷೆ ಹಾಗೂ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇದೇ ವರ್ಷದ ಅಕ್ಟೋಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಹಾಗೂ ನವೆಂಬರ್‌ ತಿಂಗಳಲ್ಲಿ ಮುಖ್ಯ ಪರೀಕ್ಷೆ ಹಾಗೂ ಮುಂದಿನ ವರ್ಷ(2023) ಜನವರಿ ಅಥವಾ ಫೆಬ್ರವರಿಯಲ್ಲಿ ಸಂದರ್ಶನ ನಡೆಸುವುದಾಗಿ (ತಾತ್ಕಾಲಿಕವಾಗಿ ನಿಗದಿಪಡಿಸಿರುವ ದಿನಾಂಕಗಳು) ಐಬಿಪಿಎಸ್ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ತಿಳಿಸಿದೆ.

ಯಾವ್ಯಾವ ಬ್ಯಾಂಕ್‌ಗಳು: ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್, ಇಂಡಿಯನ್ ಓವರಸೀಸ್ ಬ್ಯಾಂಕ್, ಯುಕೊ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್‌ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್ ಮತ್ತು ಪಂಜಾಬ್ ಹಾಗೂ ಸಿಂದ್ ಬ್ಯಾಂಕ್‌

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ : ಕನಿಷ್ಠ 20 ರಿಂದ ಗರಿಷ್ಠ 30 ವರ್ಷಗಳು. ಎಸ್‌.ಸಿ / ಎಸ್‌.ಟಿ ಹಾಗೂ ಮಾಜಿ ಸೈನಿಕರಿಗೆ 5 ವರ್ಷಗಳು ಹಾಗೂ ಒಬಿಸಿ ವರ್ಗದ ಅಭ್ಯರ್ತಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹ 850. ಎಸ್‌.ಸಿ/ಎಸ್‌.ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ₹150 ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ಐಬಿಪಿಎಸ್‌ ಸಂಸ್ಥೆಯ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆಗಸ್ಟ್‌ 2 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನ:ಆಗಸ್ಟ್‌ 22 , 2022

ಹೆಚ್ಚಿನ ಮಾಹಿತಿಗೆ: www. ibps.in ಜಾಲತಾಣಕ್ಕೆ ಭೇಟಿ ನೀಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT