ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೇಮಕಾತಿ: ಆಫೀಸರ್ಸ್ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

Published 16 ಆಗಸ್ಟ್ 2023, 16:31 IST
Last Updated 16 ಆಗಸ್ಟ್ 2023, 19:30 IST
ಅಕ್ಷರ ಗಾತ್ರ

ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 3,049 ಪ್ರೊಬೇಷನರಿ ಆಫೀಸರ‍್ಸ್‌ಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆ. 21 ಅರ್ಜಿ ಸಲ್ಲಿಕೆ ಕೊನೆ ದಿನವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಸಂಚಿಕೆಯಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಶೈಕ್ಷಣಿಕ ಅರ್ಹತೆ ಮತ್ತಿತರ ವಿಷಯಗಳ ಕುರಿತು ವಿವರಣೆ ನೀಡಲಾಗಿತ್ತು. ಈ ಸಂಚಿಕೆಯಲ್ಲಿ  ಪರೀಕ್ಷೆಯ ನಿಯಮಗಳು ಮತ್ತು ಪರೀಕ್ಷೆ ಗಿರುವ ವಿಷಯಗಳ ಕುರಿತು ವಿವರವನ್ನು ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆ: ಮೊದಲ ಹಂತದಲ್ಲಿ ಪೂರ್ವ ಭಾವಿ ಪರೀಕ್ಷೆ (ಪ್ರಿಲಿಮ್ಸ್) ನಡೆಯಲಿದೆ. ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ ದಾವಣಗೆರೆ, ದಾರವಾಡ ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪೂರ್ವಭಾವಿ  ಪರೀಕ್ಷಾ ಕೇಂದ್ರಗಳಿರಲಿವೆ.

ಪರೀಕ್ಷೆ ವಿವರ: ಪೂರ್ವಭಾವಿ ಪರೀಕ್ಷೆ ಒಂದು ಗಂಟೆ ಅವಧಿಯದ್ದು (ಪ್ರತಿ ಪತ್ರಿಕೆಗೂ  20 ನಿಮಿಷ‌ಗಳು). 100 ಅಂಕಗಳಿರುತ್ತವೆ (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿ) ಇದರಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಗೆ 30, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರು, ಹುಬ್ಬಳ್ಳಿ-ದಾರವಾಡ ಮತ್ತು ಮಂಗಳೂರಿನಲ್ಲಿ ಮಾತ್ರ ನಡೆಯಲಿದೆ.

ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯದ ಪ್ರತಿ ಪ್ರಶ್ನೆಗೆ ನಿಗದಿಪಡಿಸಿದ ಅಂಕದ 0.25 ಅಂಕವನ್ನು ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರ ಗುರುತಿಸಲಾಗಿಲ್ಲದಿದ್ದರೆ ಅಂಕ ಕಳೆಯುವುದಿಲ್ಲ.

ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನೇಮಕಾತಿ: ಆಫೀಸರ್ಸ್ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆ ಇಂಗ್ಲಿಷ್ ಭಾಷೆಗೆ (Letter Writing & Essay- with two questions)ಸಂಬಂಧಿಸಿದಂತೆ 25 ಅಂಕಗಳಿಗೆ  ಡಿಸ್ಸ್ಕ್ರಿಟಿವ್ ಟೆಸ್ಟ್ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಉತ್ತರ ಬರೆಯಬೇಕು.

ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟ್ಯ ಗಳನ್ನು ಗುರುತಿಸುವುದು ಇದರ ಕಾರ್ಯವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ.

ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತ ಸಂದರ್ಶನಕ್ಕೆ ಅರ್ಹರಾಗುತ್ತಾರೆ.

ಆಯ್ಕೆ ಪಟ್ಟಿ: ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ 40 (SC/ST/OBC/PWBD ಅಭ್ಯರ್ಥಿಗಳಿಗೆ ಶೇ 35). ಪರೀಕ್ಷೆ ಕುರಿತು ಇನ್ನಷ್ಟು ವಿವರಗಳಿಗಾಗಿ www.ibps.in ಮತ್ತು https://ibpsonline.ibps.in/crppo13jun23/ ಜಾಲ ತಾಣ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT