ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IBPS | ಪದವೀಧರರಿಗೆ ಕೆಲಸ: ವಿವಿಧ ಬ್ಯಾಂಕ್‌ಗಳಲ್ಲಿ 8106 ಹುದ್ದೆಗಳಿಗೆ ಅರ್ಜಿ

Last Updated 7 ಜೂನ್ 2022, 12:33 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.

ಒಟ್ಟು 8106 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮಲ್ಟಿಪರ್ಪಸ್‌ ಹಾಗೂ ವಿವಿಧ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ರಾಜ್ಯದ ಅಭ್ಯರ್ಥಿಗಳು ಕನ್ನಡ ಮಾಧ್ಯಮದಲ್ಲೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವರ

1) ಆಫೀಸ್ ಅಸಿಸ್ಟೆಂಟ್‌ (ಮಲ್ಟಿಪರ್ಪೋಸ್ ) -4483

2) ಆಫೀಸರ್ ಸ್ಕೇಲ್‌ (1, 2) –3623

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಎಂಬಿಎ, ಸಿಎ, ಸ್ನಾತಕೋತ್ತರ ಪದವಿ ಪಡೆದಿರಬೇಕು. ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹುದು.

ವಯಸ್ಸು: ಜೂನ್, 2022ಕ್ಕೆ ಅನ್ವಯವಾಗುವಂತೆ 20ರಿಂದ 40 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹850, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹175.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 27-06-2022

ಹೆಚ್ಚಿನ ಮಾಹಿತಿಗೆ: https://www.ibps.in/crp-rrb-xi/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT