ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ನೌಕಾಪಡೆ: 300 ನಾವಿಕ ಹುದ್ದೆಗಳು; ಅರ್ಜಿ ಸಲ್ಲಿಸಲು ನವೆಂಬರ್‌ 2 ಕಡೆ ದಿನ

Last Updated 27 ಅಕ್ಟೋಬರ್ 2021, 6:40 IST
ಅಕ್ಷರ ಗಾತ್ರ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ (ಸೈಲರ್‌) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 300 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಹುದ್ದೆಗಳ ವಿವರ: 300 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಪ್ರಿಲ್ 01, 2002 ರಿಂದ ಮಾರ್ಚ್ 31, 2005 ರ ನಡುವೆ ಜನಿಸಿರಬೇಕು.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ₹14,600 ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು.

ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02–11–2021

ವೆಬ್‌ಸೈಟ್: www.joinindiannavy.gov.in.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT