ತರಬೇತಿ ಭತ್ಯೆ ₹ 14,000 | Indian Oil: 626 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ

ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಟ್ರೇಡ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ನೇಮಕಾತಿಗೊಂಡ ಅಭ್ಯರ್ಥಿಗಳು ಭಾರತದ ಯಾವುದೇ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಉತ್ತರದ ಪ್ರಾದೇಶಿಕ ಕಚೇರಿಗಳಲ್ಲಿ ಹುದ್ದೆಗಳು ಖಾಲಿ ಇವೆ.
ಟ್ರೇಡ್ ಅಪ್ರೆಂಟಿಸ್ಗಳ ಸಂಖ್ಯೆ: 626 ಹುದ್ದೆಗಳು
ಟ್ರೇಡ್ಗಳು: ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್, ಇನ್ಸ್ಟ್ರೂಮೆಂಟ್ ಮೆಕಾನಿಕ್, ಮೆಕಾನಿಸ್ಟ್ ಟ್ರೇಡ್
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು.
ಭತ್ಯೆ: ಮಾಸಿಕ ₹14,000 ತರಬೇತಿ ಭತ್ಯೆ ನೀಡಲಾಗುವುದು.
ವಯಸ್ಸು: ಡಿಸೆಂಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24 ವರ್ಷ ವಯಸ್ಸಾಗಿರಬೇಕು.
ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ನ https://www.ioclrecruit.com/Candidate/Index.aspx ವೆಬ್ಸೈಟ್ ನೋಡಬಹುದು.
ಇದನ್ನೂ ಓದಿ: ಕೇಂದ್ರ ರೈಲ್ವೆ: SSLC, ITI ವಿದ್ಯಾರ್ಹತೆ; 2422 ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನ: 31 ಜನವರಿ 2022
ವೆಬ್ಸೈಟ್: https://www.ioclrecruit.com
ಇದನ್ನೂ ಓದಿ: BEICL: 500 ಸೂಪರ್ವೈಸರ್, ಇತರೆ ಹುದ್ದೆಗಳಿಗೆ ಅರ್ಜಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.