ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC, ITI ವಿದ್ಯಾರ್ಹತೆ: IOCLನಲ್ಲಿ 500 ಟ್ರೇಡ್‌ ಅಪ್ರೆಂಟಿಸ್‌ಗಳಿಗೆ ಅರ್ಜಿ

Last Updated 24 ಫೆಬ್ರುವರಿ 2020, 10:08 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 500 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇವುಗಳಲ್ಲಿ 364 ಟೆಕ್ನಿಕಲ್‌ ಹಾಗೂ 136 ನಾನ್‌ ಟೆಕ್ನಿಕಲ್‌ಅಪ್ರೆಂಟಿಸ್‌ಗಳ ನೇಮಕಾತಿ ನಡೆಯಲಿದೆ. ನೇಮಕಾತಿಗೊಂಡ ಅಭ್ಯರ್ಥಿಗಳು ಮಹಾರಾಷ್ಟ್ರ,ಗುಜರಾತ್‌, ಗೋವಾ, ಮಧ್ಯಪ್ರದೇಶ ಹಾಗೂ ಚತ್ತೀಸ್‌ಗಢ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಟ್ರೇಡ್‌ ಅಪ್ರೆಂಟಿಸ್ ಸಂಖ್ಯೆ: 500

ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: 28 ಫೆಬ್ರುವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24 ವರ್ಷ ವಯಸ್ಸಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿ: ಕೌಶಲ್ಯ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಯಲ್ಲಿ ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳನ್ನು ಅಪ್‌ಲೋಡ್‌ ಮಾಡಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳುಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನhttps://www.iocl.com ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 03 ಮಾರ್ಚ್‌ 2020

ವೆಬ್‌ಸೈಟ್‌:https://www.iocl.com

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT