ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ITBP: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಕ್ಷರ ಗಾತ್ರ

ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಇಲಾಖೆ ಇಂಡೊ ಟಿಬೆಟಿಯನ್ ಗಡಿ ಪೊಲೀಸ್ ಪಡೆ (ಐಟಿಬಿಪಿ)ಯಲ್ಲಿ ಖಾಲಿ ಇರುವ 37 ಸಬ್‌ ಇನ್‌ಸ್ಪೆಕ್ಟರ್‌(ಮೇಲ್ವಿಚಾರಕ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳ ಸಂಖ್ಯೆ: 37

ವಿದ್ಯಾರ್ಹತೆ: 10+2 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ, ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿರಬೇಕು.

ವೇತನ: 7ನೇ ವೇತನ ಆಯೋಗದ ಅನ್ವಯ ₹35,400–1,12,400 ವೇತನ ಲಭ್ಯವಾಗಲಿದೆ (ವಿವಿಧ ಭತ್ಯೆಗಳು ಸೇರಿ)

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 25 ವರ್ಷಗಳು. ಸರ್ಕಾರದ ನಿಯಮಾನುಸಾರ ಎಸ್ಸಿ/ಎಸ್ಟಿ/ ಹಿಂದುಳಿದ ವರ್ಗ, ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ಇದೆ.ವಿವರಗಳಿಗೆಆಯೋಗದ ವೆಬ್‌ಸೈಟ್‌ ನೋಡಿ.

ಪರೀಕ್ಷೆಯ ವಿಧಾನ: ಎರಡು ಹಂತಗಳಲ್ಲಿ ಪರೀಕ್ಷೆ ನಡೆಯುತ್ತದೆ. ಮೊದಲ ಹಂತ ಅಭ್ಯರ್ಥಿಯ ದೇಹದಾಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ. ಎರಡನೇ ಹಂತ ಲಿಖಿತ ಪರೀಕ್ಷೆ.

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಐಟಿಬಿಪಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ www.recruitment.itbpolice.nic.inಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಕೊನೆ ದಿನ: ಆಗಸ್ಟ್‌ 14, 2022

ಅಧಿಸೂಚನೆ ಸೇರಿದಂತೆ ಹೆಚ್ಚಿನ ವಿವರಗಳಿಗೆ: www.recruitment.itbpolice.nic.in

ಇಮೇಲ್ ಐಡಿ: rectsupport@itbp.gov.in

ಸಹಾಯವಾಣಿ: 011-24369482 & 24369483

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT