ರಾಷ್ಟ್ರೀಯ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 162
ಸ್ಥಳ: ದೇಶದಲ್ಲೆಡೆ
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.
ವಯೋಮಿತಿ: ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ. (ಜುಲೈ 1, 2021ಕ್ಕೆ ಅನುಗುಣವಾಗುವಂತೆ). ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಹಾಗೂ ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ಪ್ರಾಥಮಿಕ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ.