ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ನೌಕಾಪಡೆ: 338 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ; ITI ವಿದ್ಯಾರ್ಹತೆ

Last Updated 12 ಜೂನ್ 2022, 11:01 IST
ಅಕ್ಷರ ಗಾತ್ರ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್‌ ಟ್ರೇಡ್ಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 338 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಹುದ್ದೆಗಳ ವಿವರ: 338 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2001 ರ ಆಗಸ್ಟ್‌ 01 ರಿಂದ 2008 ರ ಅಕ್ಟೋಬರ್ 31 ರ ನಡುವೆ ಜನಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು.

ನೇಮಕಾತಿ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಐಟಿಐ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್‌ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-07-2022

ವೆಬ್‌ಸೈಟ್: https://indiannavy.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT