ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಾರಿಕೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳು

ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಎಂಟು ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗಾಗಿ ಅರ್ಜಿ
Last Updated 14 ಸೆಪ್ಟೆಂಬರ್ 2022, 23:30 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‌ಸಿ) ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಎಂಟು ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ‌

ಇಲಾಖೆಯ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 20ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್ 19, 2022 ಅರ್ಜಿ ಸಲ್ಲಿಸಲು ಕೊನೆ ದಿನ. ಶುಲ್ಕ ಪಾವತಿಸಲು ಅ.20 ಕೊನೆ ದಿನ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹600, ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ₹300, ಎಸ್‌.ಸಿ, ಎಸ್‌ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇದೆ. ಮಾಜಿ ಸೈನಿಕರಿಗೆ ₹50.‌

ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ವಿಜ್ಞಾನ ವಿಷಯದಲ್ಲಿ (ಬ್ಯಾಚುಲರ್ ಆಫ್‌ ಫಿಷರೀಸ್‌ ಸೈನ್ಸ್‌) ಪದವಿ ಪಡೆದಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷಗಳು. ಎಸ್‌ಸಿ, ಎಸ್‌ಟಿ ಮತ್ತು ಪ್ರ.ವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳನ್ನು ನಿಗದಿಪಡಿಸಿಲಾಗಿದೆ.

ನೇಮಕಾತಿ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣ ಆಧರಿಸಿ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ

ಎ) ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಯೂ ಋಣಾತ್ಮಕ(ನೆಗೆಟಿವ್‌) ಅಂಕವನ್ನು ಒಳಗೊಂಡಿರುತ್ತದೆ. ತಪ್ಪಾದ ಉತ್ತರಕ್ಕೆ, ಪ್ರಶ್ನೆಗಳಿಗೆ ನಿಗದಿಪಡಿಸಿದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗ(1/2)ದಷ್ಟು ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ಎ) ಸ್ಪರ್ಧಾತ್ಮಕ ಪರೀಕ್ಷಾ ಪಠ್ಯಕ್ರಮವನ್ನು ಆಯೋಗದ ವೆಬ್‌ಸೈಟ್‌ http://kpsc.kar.nic.in/ Syllabus ನಲ್ಲಿ ಪ್ರಕಟಿಸಲಾಗಿದೆ.

ಬಿ) ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತವೆ.

ಸಿ) ಅಭ್ಯರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇ 35ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯ.

ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್‌–ಒಎಂಆರ್ ಮಾದರಿ ಅಥವಾ ಕಂಪ್ಯೂಟರ್ ಆಧಾರಿತವಾಗಿ ನಡೆಸಲಾಗುತ್ತದೆ.

ಭಾಷಾ ಪತ್ರಿಕೆ ಕಡ್ಡಾಯ

ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ. ಇದು ಗರಿಷ್ಠ 150 ಅಂಕಗಳಿಗೆ ಒಂದು ಪ್ರಶ್ನೆ ಪತ್ರಿಕೆ ಇರುತ್ತದೆ. ಈ ಪತ್ರಿಕೆಯಲ್ಲಿ ಅರ್ಹತೆ ಪಡೆಯಲು ಅಭ್ಯರ್ಥಿಯು ಶೇ 50ರಷ್ಟು ಅಂಕಗಳನ್ನು ಕಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್ಸೆಸ್ಸೆಲ್ಸಿ ಹಂತದ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವಾಗಿಟ್ಟುಕೊಂಡು ರೂಪಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ: https://kpsc.kar.nic.in ಜಾಲತಾಣಕ್ಕೆ ಭೇಟಿ ನೀಡಿ.

ಅಧಿಸೂಚನೆಗಾಗಿ- https://kpsc.kar.nic.in/Notification%20of%20Asst%20Director%20of%20Fisheries%20(HK).pdf ಇಲ್ಲಿಗೆ ಭೇಟಿ ನೀಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT