‘ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್ ‘ಬಿ’, ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಗಳನ್ನು ಕೋವಿಡ್ ಮತ್ತು ಇತರ ಕೆಲವು ಕಾರಣಗಳಿಗೆ ರಾಜ್ಯ ಸರ್ಕಾರ ಮುಂದೂಡುತ್ತಲೇ ಬಂದಿದೆ. ಇದರಿಂದ ಅಭ್ಯರ್ಥಿಗಳ ವಯೋಮಿತಿ ಹೆಚ್ಚಿದ್ದು, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶದಿಂದ ವಂಚಿತರಾಗುತ್ತಿದ್ದೇವೆ. ಹೀಗಾಗಿ, ನೇರ ನೇಮಕಾತಿಗೆ ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಸಡಿಲಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.