ಕಲಬುರಗಿ: ‘ಕಾರ್ಮಿಕರ ಹಕ್ಕುಗಳ ರಕ್ಷಣೆ, ದುಡಿಯುವ ವರ್ಗದ ಕಾರ್ಮಿಕರನ್ನು ಒಗ್ಗೂಡಿಸಿ ಐಕ್ಯತೆಯ ಚಳವಳಿ ಕಟ್ಟಲು 140ನೇ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಮೇ 1ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಜಿಲ್ಲಾ ಸಮಿತಿ ಮುಖಂಡ, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಪ್ರಭುದೇವ ಯಳಸಂಗಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಕನ್ನಡ ಭವನದಿಂದ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಮರಳಿ ಕನ್ನಡ ಭವನಕ್ಕೆ ಬಂದು ತಲುಪಲಿದೆ. ಹೈಕೋರ್ಟ್ನ ಹಿರಿಯ ವಕೀಲ ಪಿ.ವಿಲಾಸಕುಮಾರ್ ಉದ್ಘಾಟಿಸುವರು. ಸಹಾಯಕ ಕಾರ್ಮಿಕ ಆಯುಕ್ತ ಮೊಹಮ್ಮದ್ ಬಷೀರ್ ಅನ್ಸಾರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ’ ಎಂದರು.

ಎಎನ್ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಘೋಳಿ, ‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಕಾರ್ಮಿಕರ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು. ‘ಎನ್ಸಿಎಲ್ನ ರಾಜ್ಯ ಉಪಾಧ್ಯಕ್ಷ ಶಂಕರ ಕಟ್ಟಿಸಂಗಾವಿ ಮಾತನಾಡಿದರು.

ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೇಡರೇಷನ್ (ಎಐಟಿಯುಸಿ) ರಾಜ್ಯ ಕಾರ್ಯಾ ಧ್ಯಕ್ಷ ಸಿದ್ದಪ್ಪ ಪಾಲ್ಕಿ, ಐಎನ್ಟಿಯುಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮಾಳಗೆ, ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎಸ್.ಎಂ. ಶರ್ಮಾ, ರಾಜು ದೊರೆ, ಶಿವಲಿಂಗ ಹಾವನೂರ, ಹೊನ್ನಪ್ಪ ಬಿ. ಸುಂಬಡ, ಬಂದಾನವಾಜ್, ಚಂದು ಜಾಧವ, ಸುನಿಲ್ ಮಾನ್ಪಡೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-34-433981434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.