ಕಲಬುರಗಿ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀದರ್ನ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಮೇ 30ರಂದು ಕಾಲೇಜಿನ ಮುಖ್ಯ ಆವರಣದಲ್ಲಿ ಒಂದು ದಿನ ಉದ್ಯೋಗ ಮೇಳವನ್ನು ಆಯೋಜಿಸಿದೆ.

ಈ ಉದ್ಯೋಗ ಮೇಳವು ಕಲ್ಯಾಣ ಕರ್ನಾಟಕ ಪ್ರದೇಶದ, ವಿಶೇಷವಾಗಿ ಬೀದರ್ ಜಿಲ್ಲೆಯ ಅರ್ಹ ಆಕಾಂಕ್ಷಿಗಳಿಗೆ ಹೊಸ ಉದ್ಯೋಗಾವಕಾಶಗಳನ್ನು ತೆರೆಯುತ್ತದೆ ಎಂದು ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಇ. ಹಾಗೂ ಎಂ. ಟೆಕ್. ಕೋರ್ಸ್ಗಳನ್ನು ಪೂರ್ಣಗೊಳಿಸಿದ ಮತ್ತು ಸದ್ಯ ಓದುತ್ತಿರುವ ಅಭ್ಯರ್ಥಿಗಳು, ಎಂಸಿಎ, ಎಂಬಿಎ, ಬಿಸಿಎ,, ಬಿ.ಕಾಂ, ಬಿಎಸ್ಸಿ, ಬಿಬಿಎಂ, ಬಿಬಿಎ, ಮತ್ತು ಐಟಿಐ ಹಾಗೂ ವಿವಿಧ ಡಿಪ್ಲೊಮಾ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಮತ್ತು ಸದ್ಯ ಓದುತ್ತಿರುವ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಸುಮಾರು 40ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಾಂಶುಪಾಲೆ ವಿನಿತಾ ಪಾಟೀಲ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ 30ರಂದು ಕಾಲೇಜಿನ ಆವರಣದ ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗೆ ವಿನಿತಾ ಪಾಟೀಲ್ ಅವರ ಮೊ.ಸಂ. 8792506036 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-33-872314959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.