ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌: ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 11 ಮೇ 2022, 19:30 IST
ಅಕ್ಷರ ಗಾತ್ರ

ಕರ್ಣಾಟಕ ಬ್ಯಾಂಕ್‌, ತಮ್ಮ ಶಾಖೆಗಳಲ್ಲಿ ಖಾಲಿ ಇರುವ ಗುಮಾಸ್ತ(ಕ್ಲರ್ಕ್) ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಮೇ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ 21 ಕೊನೆ ದಿನ. ಆನ್‌ಲೈನ್ ಮೂಲಕ ಅರ್ಜಿ ನೋಂದಣಿ ಮಾಡಿ, ಅರ್ಜಿ ಶುಲ್ಕ ಪಾವತಿಸಬೇಕು.

ವಿದ್ಯಾರ್ಹತೆ: ಯಾವುದೇ ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 60 ಅಂಕಗಳೊಂದಿಗೆ (ಪ್ರಥಮ ದರ್ಜೆ)/ ತತ್ಸಮಾನ ದರ್ಜೆಯ ಯಾವುದೇ ವಿಷಯದಲ್ಲಿ ಪದವೀಧರರಾಗಿರಬೇಕು.

ವಯೋಮಿತಿ: ಮೇ 1, 2022ಕ್ಕೆ ಗರಿಷ್ಠ 26 ವರ್ಷಗಳು ವಯಸ್ಸಾಗಿರಬೇಕು.

ಅರ್ಜಿ ಶುಲ್ಕ (ಮರುಪಾವತಿಸಲಾಗದ): ಸಾಮಾನ್ಯ ವರ್ಗಕ್ಕೆ ₹ 700, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹600 ಮತ್ತು ಜಿಎಸ್‌ಟಿ

ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳು :ಬೆಂಗಳೂರು, ಧಾರವಾಡ ಹುಬ್ಬಳ್ಳಿ, ಮಂಗಳೂರು, ಮುಂಬೈ, ಮೈಸೂರು, ನವದೆಹಲಿ ಮತ್ತು ಶಿವಮೊಗ್ಗ.

ಆನ್ ಲೈನ್ ಪರೀಕ್ಷೆಯ ಮಾದರಿ ಈ ಕೆಳಗಿನಂತಿರುತ್ತದೆ.

ಹೆಚ್ಚಿನ ವಿವರಗಳಿಗೆ ಬ್ಯಾಂಕಿನ ವೆಬ್ ಸೈಟ್ ನ್ನು ಪರಿಶೀಲಿಸಿ (https://karnatakabank.com/sites/default/files/2022-05/KBL-Clerks-Notification-2022.pdf)

ಮಾಹಿತಿ: ಬ್ರೆಟ್‌ಸಲ್ಯೂಷನ್ಸ್‌ (www.brets.in), ಸ್ಪರ್ಧಾತ್ಮಕ ತರಬೇತಿ ಕೇಂದ್ರ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT