ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಕೀ ಉತ್ತರ ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ 4000 ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 24, 2021 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಅದರ ಸರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಕೀ ಉತ್ತರಗಳ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಮನವಿ ಸಲ್ಲಿಸಬಹುದು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ಪರೀಕ್ಷಿಸಲು ಈ ಕೆಳಗಿನ ವೆಬ್‌ಸೈಟ್‌ಗೆ ಲಾಗಿನ್ ಆಗುವುದು.
ವೆಬ್‌ಸೈಟ್: http://cpc21.ksp-online.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.