ಬುಧವಾರ, ಸೆಪ್ಟೆಂಬರ್ 29, 2021
20 °C

ಕರ್ನಾಟಕ ಪೊಲೀಸ್‌ | ಮೂಲ ವೇತನ ₹ 18,600: ಅನುಯಾಯಿ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಸರ್ಕಾರದ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್‌ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡಬೇಕು.

ಹುದ್ದೆಗಳ ಸಂಖ್ಯೆ:  250

ವಿದ್ಯಾರ್ಹತೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಉರ್ತೀಣರಾಗಿರಬೇಕು.

ವೇತನ ಶ್ರೇಣಿ : ಮೂಲ ವೇತನ ₹ 18,600 ಇರಲಿದೆ. ಮಾಸಿಕ ವೇತನದಲ್ಲಿ ಇತರೆ ಭತ್ಯೆಗಳು ಸೇರಿವೆ. 

ವಯಸ್ಸು: 18ರಿಂದ 30 ವರ್ಷದೊಳಗಿನವರಾಗಿರಬೇಕು.

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ( ದಿನಾಂಕ 30-08-1991 ರಿಂದ 30-08-2003 ರ ನಡುವೆ ಜನಿಸಿರಬೇಕು.). ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: ಡಿಪ್ಲೊಮಾ ವಿದ್ಯಾರ್ಹತೆ | ವಿಕ್ರಮ್ ಸಾರಾಬಾಯಿ ಕೇಂದ್ರ: 158 ಹುದ್ದೆಗಳಿಗೆ ಅರ್ಜಿ

ಆಯ್ಕೆ ಪ್ರಕ್ರಿಯೆ: ದೈಹಿಕ ಹಾಗೂ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹುದು.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ₹ 250, ಎಸ್‌ಸಿ, ಎಸ್‌ಟಿ, ಕೆಟಗರಿ–1ರ ಅಭ್ಯರ್ಥಿಗಳಿಗೆ ₹100 ಶುಲ್ಕ ಇರಲಿದೆ. 

ಇದನ್ನೂ ಓದಿ: ಮೂಲ ವೇತನ ₹25,500 | SSB: 115 ಹೆಡ್‌ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ

ಅರ್ಜಿ ಸಲ್ಲಿಸಲು ಕೊನೆಯ ದಿನ: 30-08-2021

ಹೆಚ್ಚಿನ ಮಾಹಿತಿಗೆ: https://recruitment.ksp.gov.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು