ಕರ್ನಾಟಕ ಪೊಲೀಸ್: ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯ ಆಹ್ವಾನಿಸಲಾಗಿದೆ.
ಈ ಹಿಂದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 07, 2021 ರವರೆಗೆ ನಿಗದಿಪಡಿಸಲಾಗಿತ್ತು.ಇದೇ ಸಮಯಕ್ಕೆ ಲಾಕ್‌ಡೌನ್ ಜಾರಿಯಾಗಿದ್ದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಆನ್‌ಲೈನ್ ಅರ್ಜಿಯನ್ನು ಜುಲೈ 20, 2021 ರವರೆಗೆ ಮತ್ತು ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಜುಲೈ 22, 2021 ರವರೆಗೆ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: 84 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇಕಡ.55 ಅಂಕಗಳೊಂದಿಗೆ ಪಡೆದಿರಬೇಕು.
ಅರ್ಜಿ ಶುಲ್ಕ ವಿವರ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250 ಹಾಗೂ SC, ST, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100 ರೂ ಮಾತ್ರ.
ವಯಸ್ಸು: ದಿನಾಂಕ 20-07-2021 ಕ್ಕೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ.
ವಯೋಮಿತಿ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಪೊಲೀಸ್ ಇಲಾಖೆಯ ಅಧಿಕೃತ ಅಫೀಶಿಯಲ್ ವೆಬ್‌ಸೈಟ್ https://recruitment.ksp.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜುಲೈ 20, 2021
ವೆಬ್‌ಸೈಟ್: https://recruitment.ksp.gov.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.