ಶಿರ್ವ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಮೇ 22ರಂದು ‘ಅಭ್ಯುದಯ’ ಉದ್ಯೋಗ ಮೇಳ ಆಯೋಜಿಸುತ್ತಿದ್ದು, ಆಕಾಂಕ್ಷಿಗಳಿಗೆ 19 ಮತ್ತು 20ರಂದು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಕಾಪುವಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲ ಪ್ರೊ. ವಿಘ್ನೇಶ್ ಶೆಣೈ, ರಾಜ್ಯದ 40ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. ಪದವಿ, ಸ್ನಾತಕೋತ್ತರ ಪದವಿ, ಐಟಿ, ಬಿಫಾರ್ಮಾ, ನರ್ಸಿಂಗ್ ಹೀಗೆ ವಿವಿಧ ಪದವೀಧರರು ಭಾಗವಹಿಸಬಹುದು. ಸುಮಾರು 600 ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ತರಬೆತಿ ಕಾರ್ಯಾಗಾರದಲ್ಲಿ ಸಂದರ್ಶನ ಎದುರಿಸುವ ರೀತಿ, ಸಿ.ವಿ.ಗಳನ್ನು ಬರೆಯುವುದು ಹೇಗೆ, ಸಂದರ್ಶಕರ ಮುಂದೆ ನಿರೂಪಿಸಿಕೊಳ್ಳುವ ಬಗ್ಗೆ ತಿಳಿಸಿಕೊಡಲಾಗುತ್ತದೆ ಎಂದರು.

ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಗೋಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸುವರು. ಕೆ. ಸತ್ಯೇಂದ್ರ ಪೈ, ಪ್ರೀತಮ್ ಪ್ರಸಾದ್ ಎಸ್., ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲ ಪ್ರೊ. ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಪ್ರಾಂಶುಪಾಲ ಕುಲದೀಪ್ ವೈ.ಯು, ಪ್ಲೇಸ್ಮೆಂಟ್ ವಿಭಾಗ ಮುಖ್ಯಸ್ಥ ಆಲ್ಬನ್ ಭಾಗವಹಿಸುವರು. ಮಾಹಿತಿಗೆ 6364872304 ಸಂಪರ್ಕಿಸಬಹುದು ಎಂದರು.

ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಪ್ರಾಂಶುಪಾಲ ಕುಲದೀಪ್ ವೈ.ಯು, ಪ್ಲೇಸ್ಮೆಂಟ್ ವಿಭಾಗ ಮುಖ್ಯಸ್ಥ ಆಲ್ಬನ್ ಆಂಥೋನಿ ಪಿರೇರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-253184334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.