ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KEA ವತಿಯಿಂದ KEONICS, KFCSC, KARBWWB, MSILನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನೇರ ನೇಮಕಾತಿಗೆ ಪ್ರಕ್ರಿಯೆ ಆರಂಭ- ಮಾಹಿತಿ ಇಲ್ಲಿದೆ
Published 27 ಜೂನ್ 2023, 7:28 IST
Last Updated 27 ಜೂನ್ 2023, 7:28 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಬ್ಯಾಕ್‌ ಲಾಗ್ ಹುದ್ದೆಗಳ ನೇರ ನೇಮಕಾತಿ ಸಂಬಂಧ ಪ್ರಕ್ರಿಯೆ ಆರಂಭಿಸಿದೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (KEONICS) ನಲ್ಲಿ ವಿವಿಧ ಸ್ತರದ ಒಟ್ಟು 26 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ (KFCSC) ಖಾಲಿ ಇರುವ ವಿವಿಧ ಸ್ತರದ ಒಟ್ಟು 386 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ (KARBWWB) ಖಾಲಿ ಇರುವ ವಿವಿಧ ಸ್ತರದ ಒಟ್ಟು 186 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ ನಲ್ಲಿ (MSIL) ಖಾಲಿ ಇರುವ ವಿವಿಧ ಸ್ತರದ ಒಟ್ಟು 72 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 23 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಜುಲೈ 22 ಕೊನೆ ದಿನ. ಪ್ರತಿ ಹುದ್ದೆಗೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.

ಈ ಹುದ್ದೆಗಳಿಗೆ ಅರ್ಹತೆ, ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ಷರತ್ತು ಮತ್ತು ಹುದ್ದೆಗಳ ವರ್ಗವಾರು ವಿಂಗಡಣೆ. ಸ್ಪರ್ಧಾತ್ಮಕ ಪರೀಕ್ಷೆಗಳು ಪ್ರತ್ಯೇಕವಾಗಿದ್ದು ಆಸಕ್ತ ಅಭ್ಯರ್ಥಿಗಳು https://cetonline.karnataka.gov.in/kea/karrec23 ವೆಬ್‌ಸೈಟ್‌ಗೆ ಭೇಟಿ ನೀಡಿ ಆಯಾ ಅಧಿಸೂಚನೆಗಳನ್ನು ನೋಡಿಕೊಂಡು ಅರ್ಜಿ ಸಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT