ಖಾನಾಪುರ: ‘ಪಟ್ಟಣದ ಕೆ.ಎಲ್.ಇ ಸಂಸ್ಥೆಯ ಬಿ.ಸಿ.ಎ ಕಾಲೇಜಿನಲ್ಲಿ ಬಿ.ಸಿ.ಎ ಅಂತಿಮ ಸೆಮಿಸ್ಟರ್ ಓದುತ್ತಿರುವ 80 ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ನಿರ್ವಹಿಸಲು ಆಯ್ಕೆಗೊಂಡಿದ್ದಾರೆ’ ಎಂದು ಕಾಲೇಜಿನ ಪ್ರಾಂಶುಪಾಲ ಆನಂದ ತಾವಂಶಿ ಹೇಳಿದರು.

ಪಟ್ಟಣದ ಕೆ.ಎಲ್.ಇ ಬಿ.ಸಿ.ಎ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಅಂತಿಮ ಸೆಮಿಸ್ಟರ್ ಬಿ.ಸಿ.ಎ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳು ವಾರ್ಷಿಕ ಕನಿಷ್ಠ 4 ಲಕ್ಷದಿಂದ ಗರಿಷ್ಠ 7 ಲಕ್ಷದವರೆಗೆ ಪ್ಯಾಕೇಜ್ ಘೋಷಿಸಿ ನೇಮಕಾತಿ ಮಾಡಿಕೊಂಡಿವೆ. ಇದು ಕಾಲೇಜಿನ ಪಾಲಿಗೆ ಸಂತಸದ ಸಂಗತಿ’ ಎಂದು ಹರ್ಷ ವ್ಯಕ್ತಪಡಿಸಿದರು.

ಪತ್ರಕರ್ತ ಪ್ರಸನ್ನ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯೆ ರೂಪಾ ಕುಲಕರ್ಣಿ, ಉಪನ್ಯಾಸಕರಾದ ಶಿವಾಲಿ ಪುಠಾಣಿ, ಗಾಯತ್ರಿ ಪತ್ರಿ, ತೇಜಶ್ರೀ ಪಾಟೀಲ, ಸ್ಟೇಲಾ ಫರ್ನಾಂಡಿಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-21-2007315874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.