ಸಿದ್ದಾಪುರ: ‘ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಬೇಕು. ಸಂಜೀವಿನಿ ಒಕ್ಕೂಟದ ಮೂಲಕ ಮನೆಯಲ್ಲಿ ಜೇನು ಕೃಷಿ ಮಾಡಿ, ಜೇನುತುಪ್ಪ ಮಾರಾಟ ಮಾಡುತ್ತಿರುವುದು ಶ್ಲಾಘನೀಯ’ ಎಂದು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಇಒ ರಾಜೇಶ್ ಹೇಳಿದರು.

ಗ್ರಾಮದ ಮಹಿಳೆಯರು ಮನೆಯಲ್ಲಿ ಜೇನುಕೃಷಿ ಮಾಡಿ ಸಿದ್ಧಪಡಿಸಲಾದ ಜೇನುತುಪ್ಪ ಮಾರಾಟಕ್ಕೆ ಇಲ್ಲಿನ ಸಂಜೀವಿನಿ ಒಕ್ಕೂಟ ಮತ್ತು ಬೆಂಗಳೂರಿನ ಇಂಡಸ್ಟ್ರಿ ಫೌಂಡೇಷನ್ ವತಿಯಿಂದ ಸಿದ್ದಾಪುರದ ಗ್ರಾ.ಪಂ. ಸಭಾಂಗಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಸಂಜೀವಿನಿ ಒಕ್ಕೂಟ ಪ್ರಮುಖರಾದ ಯಮುನಾ ಮಾತನಾಡಿ, ‘ಸಿದ್ದಾಪುರದ ಸಂಜೀವಿನಿ ಒಕ್ಕೂಟ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಯನ್ನು ರೂಪಿಸಿದೆ. ಮನೆಯಲ್ಲಿ ತಿಂಡಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದೀಗ ಜೇನುತುಪ್ಪ ಮಾರಾಟ ಆರಂಭಿಸಿದೆ’ ಎಂದರು.

ಸಿದ್ದಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಜಿಲ್ಲಾ ವ್ಯವಸ್ಥಾಪಕಿ ಚಾಂದಿನಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ ರೀನಾ ತುಳಸಿ, ಸುಮತಿ, ವಸಂತಿ, ಇಂದಿರಾ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಳನಿ ಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-93926231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.