ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಉದ್ಯೋಗಾಕಾಂಕ್ಷಿಗಳು ಸೆ.1 ರಿಂದ 30ವರೆಗೆ ಅರ್ಜಿ ಸಲ್ಲಿಸಬಹುದು. ನ. 4 ರಂದು ಕನ್ನಡ ಪರೀಕ್ಷೆ, 5 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ₹ 600, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 50 ಶುಲ್ಕ ಪಾವತಿಸಬೇಕು. ಪ್ರವರ್ಗ 1, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.