ಭಾನುವಾರ, ಅಕ್ಟೋಬರ್ 2, 2022
18 °C

KPSC | ಎಫ್‌ಡಿಎ ಹುದ್ದೆಗಳ ದಾಖಲೆಗಳ ಪರಿಶೀಲನೆ: ಇಲ್ಲಿದೆ ಮಾಹಿತಿ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಲೋಕಸೇವಾ ಆಯೋಗವು (kpsc) ಆರೋಗ್ಯ ಇಲಾಖೆಯಲ್ಲಿ ಖಾಲಿ ಇದ್ದ 176 ಎಫ್‌ಡಿಎ ಹುದ್ದೆಗಳ ನೇಮಕಾತಿಯ ದಾಖಲೆಗಳ ಪರಿಶೀಲನೆ ಮಾಡಲು ದಿನಾಂಕ ನಿಗದಿಪಡಿಸಿದೆ.

ಎಫ್‌ಡಿಎ ಹುದ್ದೆಗೆ ನೇಮಕಾತಿ ಮಾಡುವ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳು, ಪ್ರಮಾಣ ಪತ್ರಗಳನ್ನು ಪರಿಶೀಲನೆ ನಡೆಸಲಾಗುವುದು. 

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ದಾಖಲಾತಿ ಪರಿಶೀಲನೆಗೆ ಕರೆ ಬಂದವರು ಈ ಕೆಳಗೆ ನೀಡಿರುವ ವಿಳಾಸಕ್ಕೆ ಹಾಜರಾಗಿ ದಾಖಲಾತಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಆಯೋಗ ತಿಳಿಸಿದೆ. 

ದಾಖಲೆ ಪರಿಶೀಲನೆ ದಿನಾಂಕ : 18-08-2022

ಸ್ಥಳ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ ಸೆಮಿನಾರ್ ಹಾಲ್, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: http://kpsc.kar.nic.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು