ಶುಕ್ರವಾರ, ಜುಲೈ 1, 2022
28 °C

ಕೆಪಿಎಸ್‌ಸಿ: ವಿವಿಧ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‌ಸಿ) ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ) ಖಾಲಿ ಇರುವ ಗ್ರೂಪ್‌ ‘ಸಿ’ ವೃಂದದ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಕಿರಿಯ ಎಂಜಿನಿಯರ್‌(ಸಿವಿಲ್), ಕಿರಿಯ ಆರೋಗ್ಯ ನಿರೀಕ್ಷಕರು, ಎಲೆಕ್ಟ್ರೀಷಿಯನ್ ಗ್ರೇಡ್‌–1 ಮತ್ತು ಗ್ರೇಡ್‌ 2, ನೀರು ಸರಬರಾಜು ಆಫರೇಟರ್‌, ಸಹಾಯಕ ನೀರು ಸರಬರಾಜು ಆಪರೇಟರ್‌ ಸೇರಿದಂತೆ ಒಟ್ಟು 410 ಹುದ್ದೆಗಳ  ನೇಮಕಾತಿ ಮಾಡಿಕೊಳ್ಳುವುದಾಗಿ ಆಯೋಗ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ.

ವಿದ್ಯಾರ್ಹತೆ: ಕಿರಿಯ ಎಂಜಿನಿಯರ್ ಹುದ್ದೆಗೆ ಮೂರು ವರ್ಷಗಳ ಅವಧಿಯ ಸಿವಿಲ್‌ ಎಂಜಿನಿಯರಿಂಗ್‌ ವಿಷಯದಲ್ಲಿ ಡಿಪ್ಲೊಮಾ ಪಾಸಾಗಿರಬೇಕು. ಎಲೆಕ್ಟ್ರಿಲ್ ಎಂಜಿನಿಯರ್‌ ಹುದ್ದೆಗೆ  ಎರಡು ವರ್ಷಗಳ ಅವಧಿಯ ಎಲೆಕ್ಟ್ರಿಕಲ್‌ ಅಥವಾ ಫಿಟರ್‌ನಲ್ಲಿ ಐಟಿಐ ಜೊತೆಗೆ, ಒಂದು ವರ್ಷ ಅಪ್ರೆಂಟಿಷಿಪ್‌ ಟ್ರೈನಿಂಗ್‌ ಪೂರ್ಣಗೊಳಿಸಿರಬೇಕು. ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗೆ ಎರಡು ವರ್ಷಗಳ ಅವಧಿಯ ಹೆಲ್ತ್‌ ಇನ್‌ಸ್ಪೆಕ್ಟರ್‌ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. 

ವಯೋಮಿತಿ: ಎಲ್ಲ ಹುದ್ದೆಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌.ಸಿ, ಎಸ್‌.ಟಿ ಅಭ್ಯರ್ಥಿಗಳಿಗೆ  5 ವರ್ಷಗಳು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ಅಂಗವಿಕಲರಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಸಲಾಗಿದೆ.

ಅರ್ಜಿ ಸಲ್ಲಿಕೆ ವಿವರ: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಇಂದಿನಿಂದ(ಮಾ. 31) ಅರ್ಜಿ ಸಲ್ಲಿಕೆ ಆರಂಭ. ಏ. 29 ಅರ್ಜಿ ಸಲ್ಲಿಕೆಗೆ ಕೊನೆ ದಿನ.

ಎರಡು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅಧಿಸೂಚನೆ ಮಾಹಿತಿಗಾಗಿ https://kpsc.kar.nic.in/Notification%20DEPT%20OF%20MUNICIPAL%20ADMN%2019... ಲಿಂಕ್ ನೋಡಿ.

188 ಸಹಾಯಕ ಎಂಜಿನಿಯರ್ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌ (ಗ್ರೂಪ್‌ ಬಿ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿ ಸಿದೆ. ಅರ್ಜಿ ಸಲ್ಲಿಸಲು ಏ.18 ಕೊನೆಯ ದಿನ‌.

ಹುದ್ದೆಗಳ ಸಂಖ್ಯೆ: 188 ಹುದ್ದೆಗಳು

ವಿದ್ಯಾರ್ಹತೆ: ಬಿ.ಇ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ವಯೋಮಿತಿ ಮಾಹಿತಿಗೆ ವೆಬ್‌ಸೈಟ್: https://www.kpsc.kar.nic.in ನೋಡಿ.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಜೂನಿಯರ್ ಎಂಜಿನಿಯರ್‌ ಹುದ್ದೆ

ರಾಜ್ಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ಸಂಖ್ಯೆ: 136 ಹುದ್ದೆಗಳು

ವಿದ್ಯಾರ್ಹತೆ: ಡಿಪ್ಲೊಮಾ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ ಪದವಿ ಪಡೆದಿರಬೇಕು. 

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಏಪ್ರಿಲ್‌ 27, 2022 

ವೆಬ್‌ಸೈಟ್: https://www.kpsc.kar.nic.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು