ಬುಧವಾರ, ನವೆಂಬರ್ 30, 2022
17 °C

KPSC | 1,323 ಎಸ್‌ಡಿಎ ನೇಮಕಾತಿ: ಮೂಲ ದಾಖಲೆಗಳ ಪರಿಶೀಲನೆ ಪಟ್ಟಿ ಬಿಡುಗಡೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) 1,323 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಪಟ್ಟಿ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತೆ ಹಾಗೂ ಕೋರಿರುವ ಮೀಸಲಾತಿಗೆ ಅನುಗುಣವಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

ಈಗಾಗಲೇ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಹೆಸರು ಮತ್ತು ನೋಂದಣಿ ಸಂಖ್ಯೆ ಇರುವ ಅಹರ್ತಾ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಆಯೋಗದ ವೆಬ್‌ಸೈಟ್‌ http://kpsc.kar.nic.in ಗೆ ಭೇಟಿ ಮಾಡಿ, ಅಭ್ಯರ್ಥಿಗಳು ಚೆಕ್‌ ಮಾಡಿಕೊಳ್ಳಬಹುದು.

2021ರ ಸೆಪ್ಟೆಂಬರ್ 19ರಂದು ಎಸ್‌ಡಿಎ ಪರೀಕ್ಷೆ ನಡೆಸಲಾಗಿತ್ತು. ಒಟ್ಟ  1,323 ಹುದ್ದೆಗಳ ನೇಮಕಾತಿ ನಡೆಯಲಿದೆ.

ವೆಬ್‌ಸೈಟ್‌: http://kpsc.kar.nic.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು