ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ

Published 23 ಮೇ 2024, 15:47 IST
Last Updated 23 ಮೇ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) 902 ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಿದೆ.

ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌ (ವಿದ್ಯುತ್‌), 17 ಸಹಾಯಕ ಎಂಜಿನಿಯರ್ (ಸಿವಿಲ್), 15 ಕಿರಿಯ ಎಂಜಿನಿಯರ್ (ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಎಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸೆಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು. ಆಯ್ಕೆ ಪಟ್ಟಿ ಪ್ರಕಟಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕಾತಿ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT