ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಲಾಗಿದೆ.
ಈ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಎರಡನೇ ಬಾರಿಗೆ ಮುಂದೂಡಿದಂತಾಗಿದೆ. ಈ ಮೊದಲು ಆಗಸ್ಟ್ 28ರವರೆಗೆ ಅವಕಾಶ ನೀಡಲಾಗಿತ್ತು.
ಈಗ ನೀಡಿರುವ ಕೊನೆ ಅವಕಾಶವನ್ನು ಮತ್ತೆ ನೀಡಲಾಗುವುದಿಲ್ಲ. ಇದು ಕೊನೆ ಬಾರಿ ಎಂದು ಕೆಇಎ ಹೇಳಿದೆ.
‘ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಸೆಪ್ಟೆಂಬರ್ 3ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.