ಮಳವಳ್ಳಿ: ತಂತ್ರಜ್ಞಾನ ಹಾಗೂ ಬದಲಾವಣೆಯ ಯುಗದಲ್ಲಿ ಯುವಕರು ಉದ್ಯೋಗ ಪಡೆಯುವುದು ಅತ್ಯವಶ್ಯಕವಾಗಿದ್ದು, ಆ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕರೆ ನೀಡಿದರು.

ಪಟ್ಟಣದ ದೊಡ್ಡಕೆರೆ ಮಹದೇಶ್ವರ ದೇವಸ್ಥಾನದ ಬಳಿ ಗಂಗಾಪರಮೇಶ್ವರಿ ಯುವಕರ ಬಳಗದ ವತಿಯಿಂದ ಆಯೋಜಿಸಿದ್ದ ಮೊದಲ ವರ್ಷದ ರಾಜ್ಯ ಮಟ್ಟದ ಜೋಡಿ ಹಸುಗಳ ಮತ್ತು ಚಕ್ಕಡಿ ಓಟ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪುರಾತನ ಹಾಗೂ ಜನಪ್ರಿಯ ಗ್ರಾಮೀಣ ಕ್ರೀಡೆಯಾಗಿರುವ ಚಕ್ಕಡಿ ಓಟ ಸ್ಪರ್ಧೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂಥ ಕ್ರೀಡಾಕೂಟಗಳ ಅವಶ್ಯಕತೆ ಇದೆ. ಹೀಗಾಗಿ ಯುವ ಸಮೂಹ ಅದನ್ನು ಉಳಿಸಿ ಬೆಳೆಸಲು ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಹಿಂದೆ ಎತ್ತಿನಗಾಡಿಗಳ ಮೂಲಕ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಇತ್ತೀಚಿನ ತಂತ್ರಜ್ಞಾನದ ಯುಗದಲ್ಲಿ ಆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಮನ್ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಡಿ.ಕೃಷ್ಣೇಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ದಿಲೀಪ್ ಕುಮಾರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪಿ.ಮಾದೇಶ್, ಮುಖಂಡರಾದ ಆಟೊ ಮಂಜು, ಸತ್ಯಣ್ಣ, ಬಂಕ್ ಮಹದೇವು, ಚೇತನ್ ನಾಯಕ್, ವೆಂಕಟೇಶ್, ಎಂ.ಡಿ.ಸಂತೋಷ್ ಕುಮಾರ, ಕೆ.ಶ್ರೀನಿವಾಸ್, ಬಸವರಾಜು, ಕೃಷ್ಣ, ಬಂಕ್ ಮಹದೇವು ಹಾಗೂ ಗಂಗಾಪರಮೇಶ್ವರಿ ಯುವಕರ ಬಳಗದ ಸದಸ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-40-1364156362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.