ಮದ್ದೂರು: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ತಿಳಿಸಿದರು.

ನಗರದ ಮಳವಳ್ಳಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀನಿಧಿಗೌಡ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಮತ್ತು ಅಕ್ಷರ ಫೌಂಡೇಶನ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ ಪ್ರತಿಭಾವಂತ ವಿದ್ಯಾವಂತರಿಗೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಮ್ಮ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಮಾತನಾಡಿ, ‘ನಿರಂತರ ಪ್ರಯತ್ನ ಮಾಡಿದರೆ ಎಲ್ಲವೂ ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ಸಣ್ಣ ಸಣ್ಣ ವಿಷಯಗಳಲ್ಲಿ ಶಿಸ್ತು ಮತ್ತು ಜವಾಬ್ದಾರಿ ಬೆಳೆಸಿಕೊಂಡಾಗ ಸಾಧನೆಗೆ ಅನೇಕ ಅವಕಾಶಗಳು ದೊರಕುತ್ತವೆ’ ಎಂದು ಹೇಳಿದರು.

ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಮಾತನಾಡಿ, ‘ಎಸ್.ಪಿ.ಸ್ವಾಮಿ ಅವರು ಹಲವು ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಜನತೆ ರಾಜಕೀಯವಾಗಿ ಶಕ್ತಿ ನೀಡಿದರೆ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಮುನ್ನುಡಿ ಬರೆಯಬಹುದು’ ಎಂದರು.

ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿದ್ದರಾಮಯ್ಯ ಮಾತನಾಡಿದರು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ 60 ಕಂಪನಿಗಳು ಭಾಗಿಯಾಗಿ 500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡು, ಸ್ಥಳದಲ್ಲಿಯೇ 157 ಮಂದಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು.

ಶಿವಪುರದ ರಾಜು ಸ್ವಾಮೀಜಿ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೃಷ್ಣೇಗೌಡ, ಮರಿಹೆಗ್ಗಡೆ, ಬೋರಯ್ಯ, ನಗರ ಘಟಕ ಅಧ್ಯಕ್ಷ ಮಧು ಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರಘು, ಮುಖಂಡರಾದ ಚನ್ನಸಂದ್ರ ಸಂತೋಷ್,ಅಶೋಕ್, ಮನುಕುಮಾರ್, ಮಧು, ಅಭಿಷೇಕ್, ಸುಧಾಕರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-2006804733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.