ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಬೌದ್ಧ, ಜೈನ, ಮುಸ್ಲಿಂ, ಪಾರ್ಸಿ, ಸಿಕ್ ಜನಾಂಗದಿಂದ ಸಿಇಟಿ, ನೀಟ್ ತೇರ್ಗಡೆ ಹೊಂದಿದವರಿಗೆ ಅರಿವು ಯೋಜನೆಯಡಿ ನೀಡುವ ಸಾಲ ಪಡೆಯಲು ಅರ್ಜಿ ಆಹ್ವಾನಿಸಿದೆ.

ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಸಿಇಟಿ, ನೀಟ್ ಪ್ರವೇಶ ಪತ್ರ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯ ದೃಢೀಕೃತ ಪ್ರತಿ, ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ 2 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಆದಾಯ ₹ 8 ಲಕ್ಷದ ಒಳಗಿರಬೇಕು. ನಿಗಮದ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮಂಗಳೂರು: ವಿವಿಧ ವಾರ್ಡ್ಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯ ಕರ್ತೆ, ಸಹಾಯಕಿ ಹುದ್ದೆಗಳ ಭರ್ತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯು ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆಯ ಅಭ್ಯರ್ಥಿ ಲಭ್ಯವಿದಿದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಹಾಯಕಿ ಹುದ್ದೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ ವಯೋಮಿತಿ 35 ವರ್ಷ ಆಗಿರುತ್ತದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನ. ಅರ್ಜಿ ನಮೂನೆ, ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸಿಲ್ವಾ ಕ್ರಾಸ್ ರೋಡ್ ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-29-1738634802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.