ಮೈಸೂರು: ಇಲ್ಲಿನ ಯಾದವಗಿರಿ ಕೈಗಾರಿಕಾ ಪ್ರದೇಶದಲ್ಲಿರುವ ಎನ್ಬಿಎ (ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್) ದೃಷ್ಟಿದೋಷವುಳ್ಳವರ ಮತ್ತು ಶ್ರವಣದೋಷವುಳ್ಳವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ಕೈಗಾರಿಕಾ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

2026–27ನೇ ಸಾಲಿಗೆ 37ನೇ ತಂಡದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಲ್ಲಿ ನಡೆಸುತ್ತಿರುವ ಈ ಸಂಸ್ಥೆಯಲ್ಲಿ, ತರಬೇತಿ ಕಾರ್ಯಕ್ರಮವು ರಾಜ್ಯ ವೃತ್ತಿ ಶಿಕ್ಷಣ ಪರಿಷತ್ತಿನಿಂದ ಮಾನ್ಯತೆ ಪಡೆದಿದೆ. 16ರಿಂದ 25 ವರ್ಷ ವಯಸ್ಸಿನ, ಎಸ್ಎಸ್ಎಲ್ಸಿ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 250 ಪ್ರಶಿಕ್ಷಣಾರ್ಥಿವೇತನ ನೀಡಲಾಗುವುದು. ಲೈಟ್ ಎಂಜಿನಿಯರಿಂಗ್, ಪ್ಲಾಸ್ಟಿಕ್ ಇಂಜೆಕ್ಷನ್ ಮೌಲ್ಡಿಂಗ್, ಬೇಸಿಕ್ ಕಂಪ್ಯೂಟರ್ ವಿಷಯದಲ್ಲಿ ತರಬೇತಿ ನೀಡಲಾಗುವುದು. ದೃಷ್ಟಿದೋಷವುಳ್ಳ ಅಭ್ಯರ್ಥಿಗಳಿಗೆ ಚಲನವಲನ ತರಬೇತಿಯನ್ನೂ ಕೊಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 94492 63784 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-39-2136371133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.