ಮೈಸೂರು: ‘ಗ್ರಂಥಾಲಯ ವಿದ್ಯಾರ್ಥಿಗಳಿಗೆ ಅನೇಕ ಉದ್ಯೋಗ ಅವಕಾಶಗಳಿವೆ. ಅವುಗಳ ಮಾಹಿತಿ ಪಡೆದು ಬಳಸಿಕೊಳ್ಳಬೇಕು’ ಎಂದು ಬೆಂಗಳೂರು ರಾಮನ್ ಸಂಶೋಧನಾ ಸಂಸ್ಥೆಯ ನಿವೃತ್ತ ಗ್ರಂಥಪಾಲಕರಾದ ಡಾ.ಬಿ.ಎಂ.ಮೀರಾ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಮೈಸೂರು ವಿವಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿದ್ಯಾರ್ಥಿಗಳ ಸಂಘದ 2025– 26ನೇ ಸಾಲಿನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಹಲವು ವರ್ಷಗಳಿಂದ ಮೈಸೂರು ವಿವಿ ಗ್ರಂಥಾಲಯ ವಿಭಾಗದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಿ, ವಿದ್ಯಾರ್ಥಿಗಳಿಗೆ ಬೇಕಾದ ಮಾಹಿತಿ ಒದಗಿಸುತ್ತಿರುವುದು ಶ್ಲಾಘನೀಯ’ ಎಂದರು.

ಮುಲಿಸಾದ ಶಿಕ್ಷಕ ಸಲಹೆಗಾರ ಎಂ.ಸುನೀಲ್ ಕುಮಾರ್ ವರದಿ ಮಂಡಿಸಿದರು. ಖಜಾಂಚಿ ಡಿ.ಸುಪ್ರಿತ ಅವರು ಸಂಘಟನೆಯ ಖರ್ಚು-ವೆಚ್ಚ ಮಂಡಿಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು. ಮೈಸೂರು ವಿವಿ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಜಿ.ಆರ್.ಜನಾರ್ಧನ, ಮುಲಿಸಾ ಅಧ್ಯಕ್ಷ ಪ್ರೊ. ಎನ್. ಎಸ್. ಹರಿನಾರಾಯಣ, ಪ್ರಾಧ್ಯಾಪಕಿ ಪ್ರೊ.ಎಚ್. ಆದಿತ್ಯಕುಮಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-38-1023492705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.