ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‌ನಲ್ಲಿ (ನಬಾರ್ಡ್) ಖಾಲಿ ಇರುವ 162 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 162 ಹುದ್ದೆಗಳು
1) ಅಸಿಸ್ಟೆಂಟ್ ಮ್ಯಾನೇಜರ್– 148
2) ರಾಜಭಾಷಾ– 05
3) ಸೆಕ್ಯೂರಿಟಿ ಸರ್ವೀಸ್– 02
4)ಮ್ಯಾನೇಜರ್ ಇನ್ ಗ್ರೇಡ್ ಬಿ –07
ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ ಅಥವಾ ಹುದ್ದೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ಕೋರ್ಸ್ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ನೇಮಕಾತಿಯ ಅಧಿಸೂಚನೆ ನೋಡುವುದು.
ವಯಸ್ಸು: 1 ಜುಲೈ 2021ಕ್ಕೆ ಅನ್ವಯವಾಗುವಂತೆ 21ರಿಂದ 30 ವರ್ಷದೊಳಗಿನವರಾಗಿರಬೇಕು.
ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ (1 ಜುಲೈ 2021ಕ್ಕೆ ಅನ್ವಯವಾಗುವಂತೆ). ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ನೇಮಕಾತಿಯು ಮೂರು ಹಂತಗಳಲ್ಲಿ ನಡೆಯಲಿದೆ.ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹100. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹750.
ಅರ್ಜಿ ಸಲ್ಲಿಸಲು ಕೊನೆಯ ದಿನ: 07, ಆಗಸ್ಟ್ 2021.
ಹೆಚ್ಚಿನ ಮಾಹಿತಿಗೆ: www.nabard.org
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.