ನರಸಿಂಹರಾಜಪುರ: ‘ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕಾರ್ಮಿಕರು ಮತ್ತು ರೈತರ ಕೊಡುಗೆಯನ್ನು ಸದಾ ನೆನಪಿಸಿಕೊಳ್ಳಬೇಕು’ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಸ್. ಜೀತು ಅಭಿಪ್ರಾಯಪಟ್ಟರು.

ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಾಯಕ ಅಭಿಯೋಜನಾ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಗೆ ಉದ್ಘಾಟಿಸಿ ಅವರು ಮಾತನಾಡಿದರು.

‘ಕನಿಷ್ಠ ಕೂಲಿ ಕಾಯ್ದೆ, ಸಮಾನ ಕೆಲಸಕ್ಕೆ ಸಮಾನ ವೇತನ, ಕಾರ್ಮಿಕರ ದೌರ್ಜನ್ಯ ತಡೆಗಟ್ಟುವ, ಕೆಲಸದ ಸ್ಥಳಗಳಲ್ಲಿ ಸೌಲಭ್ಯಗಳನ್ನು ಒದಗಿಸುವ, ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ ಸೌಲಭ್ಯ, ಮಗುವಿನ ಆರೈಕೆಗೆ ಸಂಬಂಧಿಸಿದಂತೆ ಹಲವಾರು ಕಾನೂನುಗಳು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸರ್ಕಾರ ಜಾರಿಗೆ ತಂದಿದೆ. ಕಾರ್ಮಿಕರ ಹಿತರಕ್ಷಣೆಯೇ ಈ ಕಾನೂನುಗಳ ಉದ್ದೇಶ’ ಎಂದರು.

‘ಸ್ಪರ್ಧಾತ್ಮಕತೆ ಮತ್ತು ಕೌಶಲ ಬಯಸುವ ಮುಕ್ತ ಮಾರುಕಟ್ಟೆಗೆ ಪೂರಕವಾಗಿ ಕಾರ್ಮಿಕರನ್ನು ಸಜ್ಜುಗೊಳಿಸಲು ಅವರಿಗೆ ತರಬೇತಿ ನೀಡಲಾಗುತ್ತಿದೆ. ಕಾರ್ಮಿಕರ ಶ್ರಮವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದರು.

ವಕೀಲ ಎಚ್.ಎಂ. ಬಸವರಾಜ್, ‘ಕಾರ್ಮಿಕರ ಹಿತರಕ್ಷಣೆಗೆ 18ನೇ ಶತಮಾನದಿಂದಲೂ ಕಾನೂನುಗಳು ಜಾರಿಯಲ್ಲಿವೆ. ಕಾರ್ಮಿಕರನ್ನು ಮನುಷ್ಯರಂತೆ ಕಾಣುವುದು, ಕನಿಷ್ಠ ವೇತನ ಕೊಡುವುದು, ಗಂಡು– ಹೆಣ್ಣು ಎಂಬ ತಾರತಮ್ಯ ಮಾಡದೆ ಸಮಾನ ವೇತನ ಕೊಡುವುದು, ದಿನಕ್ಕೆ ಗರಿಷ್ಠ 8ಗಂಟೆಗಳ ಕೆಲಸ, ಕಾರ್ಮಿಕ ಸಂಘಟನೆಗಳಿಗೆ ರಕ್ಷಣೆ ಒದಗಿಸುವುದು, ಮಾಲೀಕ ಮತ್ತು ಕಾರ್ಮಿಕರ ಸಂಬಂಧ ಸುಧಾರಣೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಶ್ರಮಕ್ಕೆ ಗೌರವ ಸಲ್ಲಿಕೆ ಈ ಕಾನೂನುಗಳ ಉದ್ದೇಶ’ ಎಂದರು.

ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ತಹಶೀಲ್ದಾರ್ ನೂರುಲ್ ಹುದಾ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿಯ ಲೆಕ್ಕಾಧಿಕಾರಿ ಉಷಾ, ಮಮತಾ ನಾಗರಾಜ್ ಕಾರ್ಯಕ್ರಮ ನಿರ್ವಹಿಸಿ ದರು. ಪೌರಕಾರ್ಮಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-1184370865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.