ನರೇಗಲ್: ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಅಂತಿಮ ವರ್ಷದ ಬಿಎ, ಬಿಕಾಂ, ಬಿಎಸ್ಸಿ ಹಾಗೂ ಬಿಸಿಎ ಪದವಿ ಕೋರ್ಸ್ಗಳನ್ನು ಕಲಿಯುತ್ತಿರುವ 79 ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸೆಲೆಕ್ಷನ್ನಲ್ಲಿ ನೌಕರಿ ಭಾಗ್ಯ ದೊರೆತಿದೆ.

ಈಚೆಗೆ ಕಾಲೇಜಿನಲ್ಲಿ ಬೆಂಗಳೂರಿನ ಕ್ರಿಯೇಟಿವ್ ಎಂಜಿನಿಯರ್ಸ್ ಎನ್ನುವ ಕಂಪನಿಯವರು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಕಾಲೇಜಿನಲ್ಲಿ ಮಂಗಳವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಪ್ರಾಂಶುಪಾಲ ಎಸ್. ಎಲ್. ಗಳೇದಗುಡ್ಡ, ‘ಉಪನ್ಯಾಸಕರ ನಿರಂತರ ಪ್ರಯತ್ನ ಹಾಗೂ ಶ್ರಮದ ಫಲವಾಗಿ ವಿದ್ಯಾರ್ಥಿಗಳು ಉದ್ಯೋಗ ಪಡೆದಿದ್ದಾರೆ’ ಎಂದರು.

ಹಿರಿಯ ಪ್ರಾಧ್ಯಾಪಕಿ ಜಯಶ್ರೀ ಮುತಗಾರ, ಉಪನ್ಯಾಸಕಿ ಶಶಿಕಲಾ ವಿ.ಎಸ್. ಮಾತನಾಡಿದರು. ಎಸ್.ಎಸ್. ಸೂಡಿ, ವಿರೂಪಾಕ್ಷ .ಡಿ., ಬಸವರಾಜ ಮಡಿವಾಳರ, ಸ್ನೇಹಾ ಎಕ್ಬೋಟೆ, ನಾಗಪ್ರೀಯಾ ಹುಬ್ಬಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-23-1529919270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.