ನಿಪ್ಪಾಣಿ: ‘ನಮ್ಮ ಮಂಡಳದಿಂದ ನಡೆಯುವ ತಾಂತ್ರಿಕ(ಬಿಇ), ಬಿಬಿಎ, ಬಿಸಿಎ ಮತ್ತು ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ನಿರಂತರ ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲು ಮಂಡಳದಿಂದ ತೀರ್ಮಾನಿಸಲಾಗಿದೆ’ ಎಂದು ಸ್ಥಳೀಯ ವಿದ್ಯಾಸಂವರ್ಧಕ ಮಂಡಳದ ಉಪಕಾರ್ಯಾಧ್ಯಕ್ಷ ಪಪ್ಪು ಪಾಟೀಲ ಹೇಳಿದರು.

ನಗರದ ವಿಎಸ್ಎಂ ಸೋಮಶೇಖರ ಆರ್.ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ (ವಿಎಸ್ಎಂಎಸ್ಆರ್ಕೆಐಟಿ)ದಲ್ಲಿ ಬೆಂಗಳೂರಿನ ‘ಕೆಇವೈಟುಐಆರ್’ ಕಂಪನಿಯ ಸಹಯೋಗದಲ್ಲಿ ಶುಕ್ರವಾರ ನಡೆದ ಉದ್ಯೋಗಮೇಳ ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಮಂಡಳದಿಂದ ಸಂಚಲಿತ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಮಾಣಪತ್ರಗಳನ್ನು ಕೈಯಲ್ಲಿ ಹಿಡಿದು ಉದ್ಯೋಗಕ್ಕಾಗಿ ಅಲೆಯದೆ, ಪ್ರತಿಷ್ಠಿತ ಕಂಪನಿಗಳನ್ನು ನಮ್ಮ ಮಹಾವಿದ್ಯಾಲಯಕ್ಕೆ ಕರೆಯಿಸಿ ಉದ್ಯೋಗವಕಾಶ ಕಲ್ಪಿಸಲಾಗುವುದು’ ಎಂದರು.

ವಿಎಸ್ಎಂ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ನ ಸಿಇಒ ಸಿದ್ಧಗೌಡ ಪಾಟೀಲ ಮಾತನಾಡಿ, ‘ವಿವಿಧ ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು ನಂತರ ಸಂದರ್ಶನದ ಮೂಲಕ ಐಟಿ ಹಾಗೂ ನಾನ್ ಐಟಿ ಕಂಪನಿಗಳು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿವೆ. ವಿಎಸ್ಎಂ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆಯವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದ ಕಂಪನಿಗಳನ್ನು ಕರೆಯಿಸಲು ಪ್ರಯತ್ನಗಳು ನಡೆದಿವೆ’ ಎಂದು ತಿಳಿಸಿದರು.

ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ ಅಧ್ಯಕ್ಷತೆ ವಹಿಸಿದ್ದರು. ಕೆಇವೈಟುಐಆರ್ ಕಂಪನಿಯ ಸಿಇಒ ನಾಗರಾಜ ಪರಿಟ ವಿದ್ಯಾರ್ಥಿಗಳಿಗೆ ಆಯ್ಕೆ ಪ್ರಕ್ರಿಯೆ ಕುರಿತು ಮಾರ್ಗದರ್ಶನ ನೀಡಿದರು.

ಮಂಡಳದ ಉಪಾಧ್ಯಕ್ಷ ರಜತ ಢೋಲೆ, ಕಾರ್ಯದರ್ಶಿ ಸಮೀರ ಬಾಗೇವಾಡಿ, ಸಂಚಾಲಕ ಹರಿಶ್ಚಂದ್ರ ಶಾಂಡಗೆ, ಸಚಿನ ಹಾಲಪ್ಪನವರ, ಪ್ರವೀನ ಪಾಟೀಲ, ವಿಎಸ್ಎಂಎಸ್ಆರ್ಕೆಐಟಿ ಪ್ರಾಚಾರ್ಯ ಉಮೇಶ ಪಾಟೀಲ, ವಿಎಸ್ಎಂ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಚಿದಂಬರ ಜೋಶಿ, ಕಂಪನಿಯ ಅಧಿಕಾರಿ ಶ್ರೀನಿವಾಸ ಕುಲಕರ್ಣಿ, ಸವಿತಾ ಪಿ., ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಟ್ರೇನಿಂಗ್ ಮತ್ತು ಪ್ಲೇಸ್ಮೆಂಟ್ ಅಧಿಕಾರಿ ಪ್ರೊ.ಸುನೀಲ ಸಂಗೊಳ್ಳಿ ಸ್ವಾಗತಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-21-1432321888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.