ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆಯಲ್ಲಿ 438 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ: ಶೈಕ್ಷಣಿಕ ಅರ್ಹತೆ ಇಲ್ಲ

Last Updated 19 ಜನವರಿ 2023, 6:44 IST
ಅಕ್ಷರ ಗಾತ್ರ

ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಕೆಳಗಿನಂತಿದೆ...

ಹುದ್ದೆಗಳ ಹೆಸರು: ಪೌರಕಾರ್ಮಿಕ
ಹುದ್ದೆಗಳ ಸಂಖ್ಯೆ: 438

ವಿದ್ಯಾರ್ಹತೆ: ಯಾವುದೇ ಶೈಕ್ಷಣಿಕ ಅರ್ಹತೆ ಇರುವುದಿಲ್ಲ. ಆದರೆ ಕನ್ನಡ ಭಾಷೆಯನ್ನು ಮಾತನಾಡಲು ಬರಬೇಕು.

ವೇತನ ಶ್ರೇಣಿ: ಮಾಸಿಕ ₹ 17,000 ರಿಂದ ₹ 28,950 ಸಾವಿರ ಹಾಗೂ ವಿವಿಧ ಭತ್ಯೆಗಳು

ವಯಸ್ಸು: ಕನಿಷ್ಠ 18 ವರ್ಷ ತುಂಬಿರಬೇಕು, ಗರಿಷ್ಠ 55 ವರ್ಷಗಳು ಮೀರಿರಬಾರದು ( 23-11-2022)

ಅನುಭವ: ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಕಾಲ ಕೆಲಸ ಮಾಡಿರಬೇಕು.

ಆಯ್ಕೆ ವಿಧಾನ: ವಯಸ್ಸು ಹಾಗೂ ಅನುಭವದ ಜೇಷ್ಠತೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಕೆಲಸದ ಸ್ಥಳ: ಬಾಗಲಕೋಟೆ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ವಿಧಾನ

* ನಿಗಧಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು
* ಅರ್ಜಿ ಜೊತೆ ಆಧಾರ್‌ ಕಾರ್ಡ್‌, ಜಾತಿ ಪ್ರಮಾಣಪತ್ರದ ಜೆರಾಕ್ಸ್‌ ಪ್ರತಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾಧಿಕಾರಿಗಳು, ಪೌರಕಾರ್ಮಿಕ ನೇರ ನೇಮಕಾತಿ (ವಿಶೇಷ) ಪ್ರಾಧಿಕಾರ, ಬಾಗಲಕೋಟೆ ಅಥವಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13-02-2023

ಹೆಚ್ಚಿನ ಮಾಹಿತಿಗೆ ದೂರವಾಣಿ: 08354 –235776

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT