ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕೇಂದ್ರ ರೈಲ್ವೆ: SSLC, ITI ವಿದ್ಯಾರ್ಹತೆ; 1664 ಅಪ್ರೆಂಟಿಸ್‌ ಹುದ್ದೆಗಳು

Last Updated 3 ನವೆಂಬರ್ 2021, 6:50 IST
ಅಕ್ಷರ ಗಾತ್ರ

ನವದೆಹಲಿ:ಉತ್ತರ ಕೇಂದ್ರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1664 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದು ನೇರ ನೇಮಕಾತಿಯಾಗಿರುತ್ತದೆ.

ಹುದ್ದೆಗಳ ವಿವರ:ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ

ಒಟ್ಟು ಹುದ್ದೆಗಳ ಸಂಖ್ಯೆ:1664

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ:ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ: ನವೆಂಬರ್‌2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್‌ಸಿ / ಎಸ್‌ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ ವಿಧಾನ:ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌https://www.rrcpryj.org/ ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ:01, ಡಿಸೆಂಬರ್‌, 2021

ವೆಬ್‌ಸೈಟ್‌:https://www.rrcpryj.org/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT