ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ₹25,500: PUC ವಿದ್ಯಾರ್ಹತೆ; 853 ಕಾನ್‌ಸ್ಟೆಬಲ್‌ ನೇಮಕಾತಿಗೆ ಅರ್ಜಿ

Last Updated 19 ಮೇ 2022, 11:14 IST
ಅಕ್ಷರ ಗಾತ್ರ

ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಹೆಡ್‌ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್‌ (ಎಸ್‌ಎಸ್‌ಸಿ) ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದೆ.

ಹುದ್ದೆಗಳ ವಿವರ: 853

ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವೇತನ ಶ್ರೇಣಿ: ಮಾಸಿಕ ₹ 25,500 – ₹ 81,100 (ವಿವಿಧ ಭತ್ಯೆಗಳು ಸೇರಿದಂತೆ)

ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ: ಜೂನ್‌ 2022ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 25 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ: ದೈಹಿಕ ಪರೀಕ್ಷೆ ಹಾಗೂ ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹ 100. ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ https://ssc.nic.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ:16-06-2022

ವೆಬ್‌ಸೈಟ್‌: https://ssc.nic.in/

ಅಧಿಸೂಚನೆ:https://ssc.nic.in/SSCFileServer/PortalManagement/UploadedFiles/notice_HCDP_17052022.pdf

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT