ಸೋಮವಾರ, ಅಕ್ಟೋಬರ್ 18, 2021
27 °C

ONGC: 333 ಪದವೀಧರ ಟ್ರೈನಿ ಹುದ್ದೆಗಳಿಗೆ ಅರ್ಜಿ  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗ್ರಾಜುಯೇಟ್ (ಪದವೀಧರ) ಟ್ರೈನಿ ಹುದ್ದೆಗಳ ನೇಮಕಾತಿಗೆ ಒಎನ್‌ಜಿಸಿ ಅರ್ಜಿಗಳನ್ನು ಆಹ್ವಾನಿಸಿದೆ.   ಸದರಿ ಹುದ್ದೆಗಳ ನೇಮಕಾತಿಯು ಎಂಜಿನಿಯರಿಂಗ್ ಮತ್ತು ಜಿಯೋ ಸೈನ್ಸ್‌ ವಿಭಾಗಗಳಲ್ಲಿ ಗೇಟ್‌-2020 ಪರೀಕ್ಷೆಯ ಅಂಕಗಳ ಮೂಲಕ  ಭರ್ತಿ ಮಾಡಲಾಗುತ್ತದೆ. 

ಆಸಕ್ತ ಅಭ್ಯರ್ಥಿಗಳ ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಭರ್ತಿ ಮಾಡಬೇಕು. 

ಹುದ್ದೆಗಳ ಸಂಖ್ಯೆ: 333

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ  ಪದವಿಯನ್ನು ಪಡೆದಿರಬೇಕು.

ಪರೀಕ್ಷಾ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹300 ಪ.ಜಾತಿ/ಪ.ಪಂಗಡ, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.

ವಯೋಮಿತಿ ಸಡಿಲಿಕೆ: ಅಕ್ಟೋಬರ್‌ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 30 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ 12, ಅಕ್ಟೋಬರ್‌ 2021 ಆಗಿದ್ದು ಹೆಚ್ಚಿನ ಮಾಹಿತಿಗೆ www.ongcindia.com ಗೆ ಭೇಟಿ ನೀಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು