ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

OSCB ಬ್ಯಾಂಕ್‌: 715 ವಿವಿಧ ಹುದ್ದೆಗಳಿಗೆ ಅರ್ಜಿ, ಜನವರಿ 17 ಕಡೆ ದಿನ

Last Updated 9 ಜನವರಿ 2022, 11:57 IST
ಅಕ್ಷರ ಗಾತ್ರ

ಒಡಿಶಾ ಸ್ಟೇಟ್‌ ಸೆಂಟ್ರಲ್‌ ಬ್ಯಾಂಕ್‌(oscb) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 715 ಹುದ್ದೆಗಳು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಾಗಿ ಬ್ಯಾಂಕ್‌ ಹೊರಡಿಸಿರುವ ಅಧಿಸೂಚನೆಯನ್ನು ನೋಡುವುದು.

ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2022ರ ಜನವರಿ 17 ಕೊನೆ ದಿನವಾಗಿದೆ.

ವೆಬ್‌ಸೈಟ್‌: https://ibpsonline.ibps.in/oscbasmdec21

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT